ಶಿವಮೊಗ್ಗ: ಇಂಡಿಗೋ ವಿಮಾನದಲ್ಲಿ (IndiGo Flight) ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ-ಬೆಂಗಳೂರು (Shivamogga-Bengaluru) ನಡುವಿನ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.
ಇಂದು (ಬುಧವಾರ) ಬೆಳಗ್ಗೆ 9:50 ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಟು ಶಿವಮೊಗ್ಗ ತಲುಪಿದ್ದ ವಿಮಾನ ವಾಪಸ್ 11:30 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಬೇಕಿತ್ತು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ವಿಮಾನ ಹಾರಾಟ ರದ್ದುಗೊಳಿಸಲಾಯಿತು. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಬೇಕಿದ್ದ ಸುಮಾರು 60 ಮಂದಿ ಪ್ರಯಾಣಿಕರು ವಿಮಾನ ಇಲ್ಲದ ಕಾರಣ ಪರದಾಡುವಂತಾಯಿತು.
ಈ ವೇಳೆ ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿಮಾನದಲ್ಲಿ ಉಂಟಾದ ದೋಷ ಸರಿಪಡಿಸುವಲ್ಲಿ ಮುಂದಾದರು. ಆದರೆ ಕೆಲವು ಪ್ರಯಾಣಿಕರು ವಾಪಸ್ ಹೋದರೆ, ಇನ್ನು ಕೆಲವು ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಅಧಿಕಾರಿಗಳು ವಿಶೇಷ ಬಸ್ ವ್ಯವಸ್ಥೆ ಮಾಡಿ ಬೆಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ 3 ದಿನ ಆತಂಕ ಮೂಡಿಸಿ ಕೊನೆಗೂ ಸೆರೆ ಸಿಕ್ಕ ಚಿರತೆ ಸಾವು?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]