ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ತಿಂಗಳು ಹಿಜಬ್ ವಿಚಾರವಾಗಿ ಗಲಾಟೆ ನಡೆಯುತ್ತಿದ್ದ ವೇಳೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದಳು. ಇದೀಗ ಈ ವಿಷಯ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ
Advertisement
Advertisement
ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ ವಿದ್ಯಾರ್ಥಿನಿ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಬೇಕು. ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಪಡಿಸುವಂತೆ ಆಗ್ರಹಿಸಿ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
Advertisement
ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದ ವಿದ್ಯಾರ್ಥಿನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಈ ಹಿಂದೆಯೇ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದೆವು. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ
Advertisement
ದೇಶದ್ರೋಹದ ಕೃತ್ಯ ಎಸಗಿರುವ ವಿದ್ಯಾರ್ಥಿನಿ ವಿರುದ್ಧ ಇನ್ನು ಎರಡು ದಿನದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳುವುವರೆಗೂ ಕಾಲೇಜಿನಲ್ಲಿ ಯಾವುದೇ ತರಗತಿಗಳು ನಡೆಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.