ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಓರ್ವನನ್ನು ಬೆಳಗ್ಗೆಯೇ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಖಾಸಿಫ್ ಎಂದು ಗುರುತಿಸಲಾಗಿದ್ದು, ಈತ ಕ್ಲಾರ್ಕ್ ಪೇಟೆ ನಿವಾಸಿ. ಅರೆಸ್ಟ್ ಆಗಿರುವ ಖಾಸಿಫ್ ನನ್ನ ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತಿಬ್ಬರು ಆರೋಪಿಗಳನ್ನ ಶಿವಮೊಗ್ಗದಿಂದ ಹೊರಗಿಟ್ಟು ವಿಚಾರಣೆ ನಡೆಸಲಾಗುತ್ತಿದೆ. ಐದು ಮಂದಿ ಹರ್ಷನ ಮೇಲೆ ಅಟ್ಯಾಕ್ ಮಾಡಿರುವ ಬಗ್ಗೆ ಖಾಸಿಫ್ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ಮುಸ್ಲಿಂ ಗೂಂಡಾಗಳಿಂದ ಕೊಲೆ – ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ
ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾಗಿ ಆರೋಪಿ ತಿಳಿಸಿದ್ದು, ಉಳಿದ ಆರೋಪಿಗಳಿಗಾಗಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಘಟನೆ ಸಂಬಂದಪಟ್ಟಂತೆ ಸದ್ಯ ಮೂವರನ್ನು ಬಂಧನ ಮಾಡಲಾಗಿದೆ. ಬಂಧಿತರ ಮಾಹಿತಿ ಆಧಾರದ ಮೇಲೆ ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಜಿಹಾದಿ ಮೂಲಭೂತವಾದಿಗಳಿಂದ ಕೊಲೆ: ಬಿಎಲ್ ಸಂತೋಷ್ ಆಕ್ರೋಶ
ನಿನ್ನೆ ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.