ಶಿವಮೊಗ್ಗ: ಜಿಲ್ಲೆಯಲ್ಲಿ ಎಲ್ಲಿಯಾದರೂ ಕೋವಿಡ್-19 ರೋಗಿಗಳು ಉಳಿದುಕೊಂಡಿದ್ದಾರಾ? ಸರಿಯಾಗಿ ತಪಾಸಣೆ ನಡೆಸಿಲ್ಲವಾ? ಎಲ್ಲೋ ಕೊರೊನಾ ಸೋಂಕು ಇರುವವರು ಉಳಿದುಕೊಂಡಿದ್ದು, ನಮ್ಮ ಗಮನಕ್ಕೆ ಬಂದಿಲ್ಲವಾ? ಹೀಗೆ ಜಿಲ್ಲಾಡಳಿತಕ್ಕೆ ಮೂರು ಪ್ರಶ್ನೆ ಎದುರಾಗಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯೆಲ್ಲಡೆ ಸುಮಾರು 60 ಸಾವಿರ ಮನೆಗಳಲ್ಲಿ ಆರೋಗ್ಯ ಪರಿಶೀಲನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ.
Advertisement
ಇಂದು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪತ್ರವೊಂದನ್ನು ಬರೆದಿದ್ದಾರೆ. ಈವರೆಗೂ ಕೊರೊನಾ ಪಾಸಿಟಿವ್ ಬಾರದೇ ಇರುವುದಕ್ಕೆ ಅಭಿನಂದನೆ ಸಹ ಸಲ್ಲಿಸಿದ್ದಾರೆ. ಜೊತೆಗೆ ಎಲ್ಲಾ ಮನೆಗಳಲ್ಲೂ ಬಿಡದೇ ತಪಾಸಣೆ ನಡೆಸಿ ಎಂದು ಸೂಚನೆ ಕೂಡ ನೀಡಿದ್ದಾರೆ ಎಂದು ತಿಳಿಸಿದರು.
Advertisement
Advertisement
ಪ್ರತಿದಿನ 40 ರಿಂದ 50 ಜನರು ಗಂಟರು ದ್ರವ ಮಾದರಿಗಳನ್ನು ತಪಾಸಣೆ ಮಾಡಲಾಗುತ್ತಿದ್ದು, ಕಳೆದ ನಾಲ್ಕು ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರ ತಂಡ ಆರೋಗ್ಯ ಪರಿಶೀಲನೆ ನಡೆಸಿದೆ ಎಂದಿದ್ದಾರೆ. ಈ ಪ್ರಕ್ರಿಯೆಯನ್ನು ಆಯ್ದ ಗ್ರಾಮೀಣ ಪ್ರದೇಶಗಳಲ್ಲಿ ಸಹ ಕೈಗೊಳ್ಳಲಾಗುವುದು. ಜಿಲ್ಲೆಯ ಒಳಗೆ ಪ್ರವೇಶಿಸುವ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಲಾಗುತ್ತಿದೆ. ಹೋಮ್ ಕ್ವಾರಂಟೈನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ತೀವ್ರ ನಿಗಾ ಇರಿಸಲಾಗುತ್ತಿದೆ. ಜೊತೆಗೆ ಪ್ರತಿದಿನ ನೂರು ಜನರ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಬೇಕೆಂದು ಸೂಚನೆ ನೀಡಲಾಗಿದ್ದು, ಬಿಟ್ಟು ಬಿಡದೇ ತಪಾಸಣೆ ನಡೆಸಲಾಗಿದೆ ಎಂದಿದ್ದಾರೆ.