ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಎನ್‌ಒಸಿ ನೀಡಲು 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ (Shivamogga) ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ (Lokayukta) ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ಟೌನ್‌ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ಅಶೋಕ್ ಕುಮಾರ್ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಅನೂಪ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನೂ ಓದಿ: 30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ರೂಪಿಸಿದ್ದರು. ಇಂದು (ಸೆ.24) ದೂರುದಾರರಿಂದ ಅಶೋಕ್ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿ ಹಣದ ಸಮೇತ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್ ವೀರಬಸಪ್ಪ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಹಾಸ್ಟೆಲ್ ಕಾಮಗಾರಿ ವಿಳಂಬಕ್ಕೆ ಶಿವರಾಜ್ ತಂಗಡಗಿ ತರಾಟೆ – ಡಿಸೆಂಬರ್ ಅಂತ್ಯದೊಳಗೆ ನವೀಕರಣ ಪೂರ್ಣಗೊಳಿಸಲು ಗಡುವು

