ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರನ್ನು ಬಂಧನ ಮಾಡುತ್ತೇವೆ. ಅಷ್ಟೇ ಅಲ್ಲ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಆದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು ಇಟ್ಟಿದ್ದೇವೆ. ಏನೇನೋ ಪೋಸ್ಟ್ ಹಾಕುವ ಹಾಗೆ ಇಲ್ಲ. ಪ್ರಚೋದನಕಾರಿ ಪೋಸ್ಟ್ ಮಾಡಿದರೆ ಅವರನ್ನು ಬಂಧನ ಮಾಡಲು ಸೂಚನೆ ನೀಡಲಾಗಿದೆ. ಅಲ್ಲದೆ ಕಾನೂನು ಕ್ರಮಕ್ಕೂ ನಿರ್ದೇಶನ ನೀಡಿದ್ದೇನೆ ಎಂದ ಅವರು, ಇದನ್ನು ಪೊಲೀಸ್ ಠಾಣೆಗಳಲ್ಲಿ ರಿವ್ಯೂ ಮಾಡಲು ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.
Advertisement
Advertisement
ಸಾಮಾಜಿಕ ಜಾಲತಾಣಗಳು ಒಳ್ಳೆಯ ವಾತಾವರಣ ಸೃಷ್ಟಿ ಮಾಡಲು ಬಳಸಬೇಕು ಎಂದು ಕಿವಿ ಮಾತು ಹೇಳಿದ ಅವರು, ಶಿವಮೊಗ್ಗ ಈಗ ಕಂಟ್ರೋಲ್‌ನಲ್ಲಿ ಇದೆ. ಜೊತೆಗೆ ಶಾಂತಿಯುತವಾಗಿದೆ. ಶಿವಮೊಗ್ಗ ಜನತೆಗೆ ಅಭಿನಂದನೆ ಹೇಳುತ್ತೇನೆ. ಈ ಘಟನೆ ನಡೆದದ್ದು ದುರಾದೃಷ್ಟಕರ. ಹತ್ಯೆ ಆಗಿರುವ ಹರ್ಷನ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವ ಕೆಲಸ ಸರ್ಕಾರ ಮಾಡುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ
Advertisement
Advertisement
ಯಾರೇ ಪ್ರಕರಣದಲ್ಲಿ ಭಾಗಿಯಾಗಿದರೂ ಯಾರನ್ನು ಬಿಡುವುದಿಲ್ಲ. ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ಜನರು ಆತಂಕಕ್ಕೆ ಒಳಗಾಗುವುದು ಬೇಡ. ಜನರ ರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂನವರ ಕೊಲೆಯಾಗಿದ್ರೆ ರಾಹುಲ್, ಸೋನಿಯಾ ಗಾಂಧಿ ಬರ್ತಿದ್ರು: ಯತ್ನಾಳ್