– 33 ಕಂದಮ್ಮಗಳು, ಬಾಣಂತಿಯರು ಬಚಾವ್
ಶಿವಮೊಗ್ಗ: ನಗರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ವರುಣನ ಅಬ್ಬರದಿಂದಾಗಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಭಾರೀ ಅನಾಹುತ ತಪ್ಪಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಎಲ್ಲಾ 33 ಕಂದಮ್ಮಗಳು ಸುರಕ್ಷಿತವಾಗಿದ್ದಾರೆ. ಮಹಿಳೆಯ ಆರ್ಭಟಕ ಕಡಿಮೆಯಾಗುತ್ತಿದ್ದಂತೆ ಮಕ್ಕಳು ಹಾಗೂ ಬಾಣಂತಿಯರನ್ನು ನಗರದ ಸರ್ಜಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
Advertisement
Advertisement
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಲ್ಲಾ 33 ಮಕ್ಕಳು ಹಾಗೂ ಬಾಣಂತಿಯರು ಸುರಕ್ಷಿತರಾಗಿದ್ದಾರೆ. ಆದರೆ ಮೂವರು ಮಕ್ಕಳಿಗೆ ಸ್ವಲ್ಪ ಉಸಿರಾಟದ ತೊಂದರೆ ಆಗಿದ್ದು ವೈದ್ಯರ ಗಮನಕ್ಕೆ ಬಂದಿದೆ. ಅವರು ಚಿಕಿತ್ಸೆ ನಡೆಸಿದ್ದಾರೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ ಎಂದು ತಿಳಿಸಿದರು.