ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಜಿಲಾನಿ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹರ್ಷನ ಕೊಲೆ ಬಳಿಕ ಜಿಲಾನಿ ಕಾರು ಚಾಲನೆ ಮಾಡಿದ್ದ. ಆರೋಪಿಗಳನ್ನು ಸ್ವಿಫ್ಟ್ ಕಾರಿನಲ್ಲಿ ಕರೆದೊಯ್ದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ – ಸರ್ಕಾರಕ್ಕೆ ಸೂಲಿಬೆಲೆ ಪ್ರಶ್ನೆ
Advertisement
ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು, ಜಿಲಾನಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಶಿವಮೊಗ್ಗದ ಕ್ಲಾರ್ಕ್ ಪೇಟೆ ನಿವಾಸಿಗಳಾಗಿದ್ದಾರೆ.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೇಸ್ ಸಂಬಂಧ ಎ1 ಆರೋಪಿ ಖಾಸಿಫ್ ನೀಡಿದ ಮಾಹಿತಿ ಮೇರೆಗೆ 6ನೇ ಆರೋಪಿ ಮುಜಾಹಿದ್ ಮುಜ್ಜುನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಈಶ್ವರಪ್ಪನವರಿಗೆ ಹಾಗೂ ಸುಪಾರಿ ಕೊಟ್ಟವರಿಗೆ ಏನೋ ಸಂಬಂಧ ಇದೆ: ಎಸ್‍ಡಿಪಿಐ