ಶಿವಮೊಗ್ಗ: ಗಂಡ- ಹೆಂಡತಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತಳನ್ನು ಮಂಜುಳಾ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗ(Shivamogga) ದ ಪ್ರಿಯಾಂಕ ಲೇಔಟ್ (Priyanka Layout) ನಲ್ಲಿ ಈ ಘಟನೆ ನಡೆದಿದ್ದು, ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಮಂಜುಳಾ ಮೃತದೇಹ ಪತ್ತೆಯಾಗಿದೆ.
ಇತ್ತ ಪತ್ನಿ ಕೊಲೆ ಬಳಿಕ ಪತಿ ದಿನೇಶ್ ಕೂಡ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಸ್ಥಳೀಯರು, ಮಂಗಳವಾರ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ಸದ್ಯ ಪ್ರಕರಣ ಸಂಬಂಧ ಮಹಿಳೆಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ..? ಅಥವಾ ಕೊಲೆಯೇ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ. ಸ್ಥಳಕ್ಕೆ ತುಂಗಾನಗರ ಠಾಣೆ (TungaNagar Police Station) ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.