ಶಿವಮೊಗ್ಗ: ಕಳೆದ ವರ್ಷ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಇದೀಗ ಮಲೆನಾಡಿಗೆ ಮತ್ತೊಮ್ಮೆ ಕಾಲಿಟ್ಟಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೋಟದ ಕೊಪ್ಪ ಗ್ರಾಮದಲ್ಲಿ ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ತಿಮ್ಮಪ್ಪ ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷಿಸಿದಾಗ ಮಂಗನ ಕಾಯಿಲೆ ಇರೋದು ದೃಢಪಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ನಂತರ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿರೋ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲೆಯಲ್ಲಿ ಇದೂವರೆಗೆ ಯಾವುದೇ ಮಂಗನ ಕಾಯಿಲೆ ಪತ್ತೆಯಾಗಿಲ್ಲ. ತೋಟದ ಕೊಪ್ಪದ ವ್ಯಕ್ತಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ. ಈಗಾಗಲೇ ಹಲವೆಡೆ ಚುಚ್ಚುಮದ್ದು ಲಸಿಕೆ ಹಾಕುವ ಕಾರ್ಯ ಸಹ ನಡೆಯುತ್ತಿದೆ. ಹೀಗಾಗಿ ಮಂಗನ ಕಾಯಿಲೆ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ