ಶಿವಮೊಗ್ಗ: ತೀರ್ಥಹಳ್ಳಿ (Thirthahalli) – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಭೂಕುಸಿತ (Landslide) ಉಂಟಾಗಿದೆ. ಮಳೆ (Rain) ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ತೀರ್ಥಹಳ್ಳಿಯಿಂದ ರಾವೆ – ಕಾನಗೋಡು – ಮಾಸ್ತಿಕಟ್ಟೆ- ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ – ರಾವೆ- ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸುವಂತೆ ತಿಳಿಸಲಾಗಿದೆ. ಇದನ್ನೂ ಓದಿ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ – ಭಾರೀ ಮಳೆಯಾಗುವ ಸಾಧ್ಯತೆ
ನಗರ – ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆ ತೀರ್ಥಹಳ್ಳಿಯಿಂದ ಯಡೂರು – ಸುಳಗೋಡು – ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ಶಿವಮೊಗ್ಗ (Shivamogga), ಸಾಗರ ಕಡೆಯಿಂದ ಹೊಸನಗರ – ನಗರ – ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರದ ಕಡೆ ಹೋಗುವ ಭಾರಿ ವಾಹನಗಳು, ಶಿವಮೊಗ್ಗ – ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ – ಭಟ್ಕಳ-ಬೈಂದೂರು- ಕುಂದಾಪುರ ರಸ್ತೆಯ ಮೂಲಕ ಸಂಚರಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮೂಡಿಗೆರೆ | ಹೆಚ್ಚಿದ ಕಾಡಾನೆ ಉಪಟಳ – ಓಡಿಸಲು ಅನುಮತಿ ಇಲ್ಲ ಎಂದ ಅಧಿಕಾರಿಗಳು!