ಶಿವಮೊಗ್ಗ: ನಾಳೆಯಿಂದ ಕಂಟೈನ್‍ಮೆಂಟ್ ಜೋನ್‍ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ.
ಕೊರೊನಾ ಲಾಕ್‍ಡೌನ್ ನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರವೂ ಕೆಲ ನಿಮಗಳು ಮತ್ತು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಒಂದು ದಿನಕ್ಕೆ ಒಬ್ಬರಿಗೆ ಇಂತಿಷ್ಟೇ ಮದ್ಯ ನೀಡಬೇಕು ಎಂದು ನಿಗದಿ ಮಾಡಿದೆ.
Advertisement
Advertisement
ಪ್ರತಿಯೊಬ್ಬ ಗ್ರಾಹಕನಿಗೆ 2.3 ಲೀ. ಮದ್ಯ ಅಥವಾ 6 ಕ್ವಾಟರ್, 4 ಬಾಟಲ್ ಬೀರ್ ಅಥವಾ 6 ಪಿಂಟ್ ಬಾಟಲಿಗಳನ್ನು ಮಾತ್ರ ಮಾರಾಟ ಮಾಡಬೇಕು ಅದಕ್ಕಿಂತ ಹೆಚ್ಚಿನ ಮದ್ಯವನ್ನು ಒಬ್ಬನೇ ಗ್ರಾಹಕನಿಗೆ ಮಾರಾಟ ಮಾಡುವಂತಿಲ್ಲ. ಅಲ್ಲದೇ ಗ್ರಾಹಕನಿಗೆ ಕೇವಲ ಪಾರ್ಸಲ್ ಮಾತ್ರ ನೀಡಬೇಕು ಕೌಂಟರ್ ನಲ್ಲಿ ಕುಡಿಯುವುದಕ್ಕೆ ಅವಕಾಶ ನೀಡಬಾರದು. ಜೊತೆಗೆ ಮದ್ಯದ ಅಂಗಡಿಯಲ್ಲಿ ಕೇವಲ 5 ಮಂದಿ ಮಾತ್ರ ಇರಬೇಕು. ಇವರು ಮಾಸ್ಕ್, ಕೈಗವಸು, ಸ್ಯಾನಿಟೈಜರ್ ಬಳಕೆ ಮಾಡಬೇಕು ಎಂದು ಸೂಚಿಸಿದೆ.
Advertisement
Advertisement
ಇದರ ಜೊತೆಗೆ ಮದ್ಯದಂಗಡಿಗೆ ಬಂದು ಮದ್ಯಕೊಳ್ಳುವವರು ಗುಂಪಿನಲ್ಲಿ ಬರಬಾರದು. ಸುಮಾರು ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಂಗಡಿ ಮುಂಭಾಗದಲ್ಲಿ ಜನಜಂಗುಳಿ ಸೇರದಂತೆ ನೋಡಿಕೊಳ್ಳಬೇಕು. ಬ್ಯಾರಿಕೇಡ್ ಅಳವಡಿಸಬೇಕು. ಸಿಸಿ ಕ್ಯಾಮರಾ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಅಂಗಡಿ ಮಾಲೀಕರೆ ನೇಮಿಸಿಕೊಳ್ಳುವ ಮೂಲಕ ಯಾವುದೇ ಗೊಂದಲ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಷರತ್ತುಗಳು ಏನು?
1. ಕಂಟೈನ್‍ಮೆಂಟ್ ಝೋನ್ ಬಿಟ್ಟು ಉಳಿದೆಡೆ ಮದ್ಯ ಮಾರಾಟ
2. ವೈನ್‍ಶಾಪ್, ಎಂಆರ್‍ಪಿ, ಎಂಎಸ್‍ಐಎಲ್‍ಗಳಲ್ಲಿ ಮದ್ಯ ಮಾರಾಟ
3. ಬೆಳಗ್ಗೆ 9ರಿಂದ ಸಂಜೆ 7 ಗಂಟೆಯವರೆಗೂ ವೈನ್‍ಶಾಪ್ ಓಪನ್
4. ವೈನ್ ಶಾಪ್‍ನಲ್ಲಿ ಮದ್ಯಪಾನ ಇಲ್ಲ, ಪಾರ್ಸಲ್‍ಗಷ್ಟೇ ಅವಕಾಶ
5. ಸೂಪರ್ ಮಾರ್ಕೆಟ್ ಗಳಲ್ಲಿ ಮದ್ಯ ಮಾರಾಟ ಇರಲ್ಲ
6. ಬಾರ್ ಅಂಡ್ ರೆಸ್ಟೋರೆಂಟ್ ತೆರೆಯುವಂತೆ ಇಲ್ಲ
7. ಮದ್ಯಕೊಂಡು ಕೊಳ್ಳುವವರಿಗೆ ಮಾಸ್ಕ್ ಕಡ್ಡಾಯ
8. ಮದ್ಯದಂಗಡಿಯಲ್ಲಿ ಸ್ಯಾನಿಟೈಸರ್ ಬಳಕೆ ಕಡ್ಡಾಯ
9. 5 ಜನ ಮಾತ್ರ ಇರುವಂತೆ ನೋಡಿಕೊಳ್ಳಬೇಕು
10. 6 ಅಡಿ ಸಾಮಾಜಿಕ ಅಂತರ ಇರಬೇಕು