ಶಿವಮೊಗ್ಗ: ಪ್ರೇಮ ವೈಫಲ್ಯದ ಹಿನ್ನೆಲೆ ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಸಾವನ್ನಪ್ಪಿದ್ದಾನೆ.
ಜಿಲ್ಲೆಯ ಹೊಸನಗರ ತಾಲೂಕಿನ ನೇರಲಗಿ ಬಳಿ ಘಟನೆ ನಡೆದಿತ್ತು. ನರ್ಸಿಂಗ್ ವಿದ್ಯಾರ್ಥಿನಿ ಕವಿತಾ(21) ಹಾಗೂ ಬಿಕಾಂ ವಿದ್ಯಾರ್ಥಿ ಶಿವಮೂರ್ತಿ(21) ಕಳೆದ 7 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚಿಗೆ ಕವಿತಾ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ ಕವಿತಾ ವಿರುದ್ಧ ಕೆರಳಿದ್ದ ಶಿವಮೂರ್ತಿ, ಜಿಲ್ಲೆಯ ಹೊಸನಗರ ತಾಲೂಕಿನ ನೇರಲಗಿ ಬಳಿ ಪ್ರೇಯಸಿ ಕವಿತಾಳನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ.
ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿ ಶಿವಮೂರ್ತಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೂರ್ತಿ ಸಹ ಶುಕ್ರವಾರ ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಪ್ರಕರಣ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೇಮ ವೈಫಲ್ಯ- ಪ್ರಿಯತಮೆಯನ್ನು ಕೊಲೆಗೈದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿ
ಹೊಸನಗರ ತಾಲೂಕಿನ ನೇರಲಗಿ ಗ್ರಾಮದ ಕವಿತಾ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೊಸನಗರ ತಾಲೂಕಿನ ಕಗಲಿ ಗ್ರಾಮದ ಶಿವಮೂರ್ತಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದನು. ಕೊಲೆಯಾದ ಕವಿತಾ ಹಾಗೂ ಕೊಲೆಗೈದ ಆರೋಪಿ ಶಿವಮೂರ್ತಿ ಇಬ್ಬರೂ 7 ವರ್ಷದಿಂದ ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕವಿತಾ, ಶಿವಮೂರ್ತಿ ಜೊತೆಗಿನ ಪ್ರೀತಿ ತೊರೆದು ಭದ್ರಾವತಿ ಮೂಲದ ಅಂಬುಲೆನ್ಸ್ ಚಾಲಕನ ಪ್ರೇಮ ಪಾಶಕ್ಕೆ ಸಿಲುಕಿದ್ದಳು. ಅಂಬುಲೆನ್ಸ್ ಚಾಲಕನ ಜೊತೆ ಕವಿತಾಗೆ ಪ್ರೇಮಾಂಕುರವಾಗುತ್ತಿದ್ದಂತೆ ಶಿವಮೂರ್ತಿಯನ್ನು ದೂರ ಮಾಡ ತೊಡಗಿದ್ದಳು. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ
ಇದರಿಂದ ರೊಚ್ಚಿಗೆದ್ದ ಭಗ್ನಪ್ರೇಮಿ ಶಿವಮೂರ್ತಿ, ಬುಧವಾರ ಮಧ್ಯಾಹ್ನ ಕವಿತಾಳನ್ನು ನಿನ್ನ ಜೊತೆ ಮಾತನಾಡಬೇಕು ಎಂದು ನೇರಲಗಿ ಬಳಿ ಕರೆಯಿಸಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಮೊದಲೇ ಪ್ರಿಯತಮೆಯನ್ನು ಕೊಲೆಗೈದು, ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಶಿವಮೂರ್ತಿ ನಿರ್ಧರಿಸಿದ್ದ. ಅದರಂತೆ ಪ್ರಿಯತಮೆಯನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಅಲ್ಲದೆ ಕವಿತಾಳನ್ನು ತಾನೇ ಕೊಲೆಗೈದಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದ.