ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದಿದೆ. ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಸ್ಥಳೀಯ ಶಾಸಕ ಎಸ್.ಎನ್.ಚನ್ನಬಸಪ್ಪ, ಈದ್ ಮಿಲಾದ್ ಮೆರವಣಿಗೆ ಹೋಗುತ್ತಿದ್ದ ವೇಳೆ ಹಿಂಭಾಗದಿಂದ ಬಂದಂತಹ ಅನ್ಯಗುಂಪೊಂದು ಕಲ್ಲು ತೂರಾಟ (Stone Throwing) ನಡೆಸಿದ್ದು, ಉದ್ವಿಗ್ನತೆಗೆ ಕಾರಣವಾಗಿದೆ. ಘಟನೆಯಲ್ಲಿ ಎಸ್ಪಿ ಗನ್‌ಮ್ಯಾನ್ ಹಾಗೂ ಓರ್ವ ಪೊಲೀಸ್ ಅಧಿಕಾರಿಗೆ ಪೆಟ್ಟಾಗಿದೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ
Advertisement
Advertisement
ಹಬ್ಬ ಶಾಂತಿಯುತವಾಗಿ ನಡೆದಿದೆ. ಆದ್ರೆ ಘಟನೆ ನಡೆದಂತಹ ಸಂದರ್ಭದಲ್ಲಿ ಉತ್ತರ ಪ್ರದೇಶದಿಂದ ಬಂದ ವಾಹನಗಳು ಕಂಡುಬಂದಿವೆ. ಅವು ಏಕೆ ಬಂದಿದ್ದವು ಅನ್ನೋ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ಈ ರೀತಿಯ ವಾಹನಗಳನ್ನ ಹೊರಗೆ ಹೋಗದ ರೀತಿ ನೋಡಿಕೊಳ್ಳಬೇಕು. ಕಲ್ಲು ತೂರಾಟ ಯಾರು ಮಾಡಿದ್ರು? ಏಕೆ ಮಾಡಿದ್ರು ಅನ್ನೋದು ಗೊತ್ತಾಗಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
Advertisement
ಗಣೇಶ ವಿಸರ್ಜನೆ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆ ಚೆನ್ನಾಗಿ ಆಗಿದೆ. ಇನ್ನೇನು ಮುಕ್ತಾಯ ಹಂತದ ಸಂರ್ಭದಲ್ಲಿ ಈ ರೀತಿ ಘಟನೆ ಸಂಭವಿಸಿದೆ. ಈ ಘಟನೆಯಿಂದ ಅನೇಕ ಮನೆಗಳು ಹಾಗೂ ವಾಹನಗಳು ಜಖಂ ಆಗಿವೆ. ಭಯದ ವಾತಾವರಣ ಸೃಸ್ಟಿಯಾಗಿದೆ. ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಕೊಂಡು ಬಿಡ್ತು ಅನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Asian Games 2023: ಕೊನೇ ಪ್ರಯತ್ನದಲ್ಲಿ ಗುಂಡು ಎಸೆದು ಚಿನ್ನ ಗೆದ್ದ ಗಂಡುಗಲಿ – ಭಾರತಕ್ಕೆ ಒಂದೇ ದಿನ 15 ಪದಕ
Advertisement
ಪೊಲೀಸ್ ಇಲಾಖೆ ಸಕಲ ಬಂದೋಬಸ್ತ್ ಮಾಡಿದೆ. ಹೊರನಿಂದ ಬಂದವರೇ ಈ ಕೃತ್ಯ ಎಸಗಿದ್ದಾರೆ. ಇಂದರಿಂದ ನಾಗರಿಕರು ಭಯಪಡುವ ಅವಶ್ಯಕತೆಯಿಲ್ಲ. ನಿಮಗೇನಾದರೂ ತೊಂದರೆಯಾಗಿದ್ದರೆ ನಮ್ಮ ಗಮನಕ್ಕೆ ತನ್ನಿ. ನಾವು ನಿಮ್ಮ ಜೊತೆಗಿದ್ದೇವೆ ಎಂದು ಅಭಯ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ: ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಪೊಲೀಸರು ತೆರಳು ಗುಂಪು ಚದುರಿಸಿದ್ದಾರೆ. ಮೆರವಣಿಗೆ ವೇಳೆ ಎರಡು ಕೋಮುಗಳಿಂದ ಪರಸ್ಪರ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಇಬ್ಬರಿಗೆ ಗಾಯವಾಗಿದೆ. ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂದು ಓಮಿನಿ ಕಾರು ಮತ್ತು ಮೂರು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಗಾಂಧಿ ಬಜಾರಿನ ಜಾಮಿಯಾ ಮಸೀದಿಯಿಂದ ಮುಸ್ಲಿಂ ಬಾಂಧವರು ಭಾನುವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಮೆರವಣಿಗೆ ಆರಂಭಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಈ ವಿಚಾರವಾಗಿ ಗೊಂದಲ ಸೃಷ್ಟಿಯಾಗಿತ್ತು. ಪರಿಣಾಮವಾಗಿ ಸ್ಥಳದಲ್ಲಿ ಮುಸ್ಲಿಂ ಬಾಂಧವರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.
Web Stories