ಶಿವಮೊಗ್ಗ: ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿಗಳನ್ನು ಪೈಕಿ 6 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Advertisement
ಖಾಸಿಫ್, ನದೀಮ್, ಆಸೀಫ್ ಖಾನ್, ರಿಯಾನ್ ಷರೀಫ್ ಖಾಸಿ, ನಿಹಾನ್ ಮುಜಾಹಿದ್, ಅಬ್ದುಲ್ ಆಫಾನ್ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹರ್ಷನ ಕೊಲೆ ಪ್ರಕರಣದಲ್ಲಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಗಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಂದೆ
Advertisement
ಮಾರ್ಚ್ 8ರವರೆಗೆ 6 ಆರೋಪಿಗಳಿಗೆ ಜೈಲು ಗತಿಯಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಮರ್ಡರ್ ಕೇಸ್‌ನ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಎಡಿಜಿಪಿ ಮುರುಗನ್ ಬೆಂಗಳೂರಿಗೆ ವಾಪಸ್ ಆದ ಹಿನ್ನೆಲೆಯಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ರಮಣಗುಪ್ತಗೆ ತನಿಖೆ ಹೊಣೆ ವಹಿಸಲಾಗಿದೆ.
Advertisement
Advertisement
ಭಜರಂಗದಳದ ಹರ್ಷ ಎಂಬ ಯುವಕನನ್ನು ಗುಂಪೊಂದು ಮೂರು ದಿನಗಳ ಹಿಂದೆ ಹತ್ಯೆ ಮಾಡಿ ಪರಾರಿಯಾಗಿತ್ತು. ಕೊಲೆಯಾದ ತಕ್ಷಣ ಶಿವಮೊಗ್ಗ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಹರ್ಷ ಕೊಲೆ ಕೇಸ್ ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ಎನ್‍ಕೌಂಟರ್ ಮಾಡಿ: ಮುತಾಲಿಕ್