ಬೆಂಗಳೂರು: ಈಶ್ವರಪ್ಪ ಹಾಗೆ ಹೇಳಿದ್ದಾರೆ ಎಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಕೊಲೆ ಪ್ರಕರಣದ ವಿಚಾರವನ್ನು ಸರ್ಕಾರ ಸರಿಯಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆಯೂ ಇಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದರಿಂದಾಗಿ ಸರ್ಕಾರ ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು. ಆದಷ್ಟು ಬೇಗ ಆರೋಪಿಗಳನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸಿದರು.
Advertisement
Advertisement
ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ಹಾಗೆ ಹೇಳಿದ್ದಾರೆ ಎಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ಕೊಲೆಯಿಂದ ಸರ್ಕಾರದ ವೈಫಲ್ಯ ಎಂದು ಹೇಳಲು ಆಗುವುದಿಲ್ಲ. ಸಂಪೂರ್ಣ ತನಿಖೆ ಆಗಬೇಕು. ತಪ್ಪಿತಸ್ಥ ಗೂಂಡಾಗಳನ್ನು ಬಂಧನ ಮಾಡಬೇಕು. ಅದನ್ನು ರಾಜ್ಯ ಸರ್ಕಾರ ಮಾಡುತ್ತದೆ ಎಂದು ತಿಳಿಸಿದರು.
Advertisement
Advertisement
ಕಾಂಗ್ರೆಸ್ ಧರಣಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ಗೆ ಬೇರೆ ವಿಚಾರ ಇಲ್ಲ. ಅದಕೋಸ್ಕರ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಮಧ್ಯೆ ಕಿತ್ತಾಟ ಇದೆ. ಮೊದಲು ಆ ಸಮಸ್ಯೆ ಬಗೆಹರಿಸಿಕೊಳ್ಳಲಿ. ಪ್ರತಿಭಟನೆ ಮಾಡುವ ಹಕ್ಕು ಇದೆ. ಆದರೆ ಪ್ರತಿಭಟನೆ ಮಾಡುವ ವಿಷಯ ಇದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ
ಹಿಜಬ್ ಗೊಂದಲ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‌ಗೆ ಹಿಜಬ್ ವಿಚಾರದಲ್ಲಿ ಸ್ಪಷ್ಟತೆ ಇಲ್ಲ. ಕಾಂಗ್ರೆಸ್ ಗೊಂದಲದ ಪಾರ್ಟಿಯಾಗಿದೆ. ಮುಸ್ಲಿಂ ಓಟ್ ಕೈತಪ್ಪುತ್ತದೆ ಎಂದು ಏನು ಮಾತಾಡುತ್ತಿಲ್ಲ. ಕಾಂಗ್ರೆಸ್ ನಾಯಕರು ಹೈಕೋರ್ಟ್ ಆದೇಶ ಪಾಲನೆ ಮಾಡಿ ಎಂದು ಹೇಳಲಿ ನೋಡೋಣ ಎಂದು ಸವಾಲೆಸೆದ ಅವರು, ಅದನ್ನು ಹೇಳೋ ಧೈರ್ಯ ಅವರಿಗೆ ಇಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ