ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿಯನ್ನು ಶಿವಮೊಗ್ಗ (Shivamogga) ಪೊಲೀಸರು (Police) ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಿದ್ದಾರೆ. ಕೋರ್ಟ್‍ಗೆ (Court) ಕರೆತಂದ ವೇಳೆ ಕೋರ್ಟ್ ಆವರಣದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದ ಕೃಷ್ಣಮೂರ್ತಿ ಮಾವೋವಾದಿ ನಕ್ಸಲರ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದ.
ಆರೋಪಿ ವಿರುದ್ಧ 5 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ತೀರ್ಥಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ, ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಅದರಲ್ಲಿ ಹೊಸಗದ್ದೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಸುಟ್ಟಿದ್ದು ಮತ್ತು ಫಾರೆಸ್ಟ್ ಗೇಟ್ ಸುಟ್ಟ ಪ್ರಕರಣ ಸೇರಿದೆ. ಇದನ್ನೂ ಓದಿ: ಕೆಐಆರ್‌ಡಿಎಲ್ ಇಇ ಮನೆ ಮೇಲೆ ಲೋಕಾ ದಾಳಿ – ಆದಾಯಕ್ಕಿಂತಲೂ 165 ಪಟ್ಟು ಅಧಿಕ ಆಸ್ತಿ ಪತ್ತೆ
ನ.2021 ರಲ್ಲಿ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನು ಬಂಧಿಸಿದ್ದರು. ಬಳಿಕ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಲ್ಲಿ ಇರಿಸಿದ್ದರು. ಮಂಗಳವಾರ ರಾತ್ರಿ ಶಿವಮೊಗ್ಗ ಪೊಲೀಸರು ಬಾಡಿ ವಾರೆಂಟ್ ಮೇಲೆ ಬಿಗಿ ಬಂದೋಬಸ್ತ್‍ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಕೇರಳ ಹಾಗೂ ಕರ್ನಾಟಕ ಸೇರಿದಂತೆ ಆರೋಪಿ ವಿರುದ್ಧ ಒಟ್ಟು 62 ಪ್ರಕರಣ ದಾಖಲಾಗಿವೆ.
ನಕ್ಸಲ್ ಮುಖಂಡ ಸಾಕೇತ್ ರಾಜನ್ ಬಳಿಕ ನಕ್ಸಲ್ ನಾಯಕನಾಗಿ ಗುರುತಿಸಿಕೊಂಡಿದ್ದ ಬಿ.ಜಿ.ಕೃಷ್ಣಮೂರ್ತಿ ಪ್ರಮುಖ 5 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಇಂದು ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು ನಾಳೆಗೆ ಮತ್ತೊಂದು ಪ್ರಕರಣದ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಪಾರ್ಕ್ ಮಾಡಿದ್ದ ಕಾರಿನಿಂದ 2.65 ಕೋಟಿ ರೂ. ನಗದು ವಶ