ಶಿವಮೊಗ್ಗ: ಕರ್ನಾಟಕದಲ್ಲಿ ಆವ್ಯಾಹತವಾಗಿ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ತಿಳಿದು ಮಹಾರಾಷ್ಟ್ರದ ಪೊಲೀಸರು ಕರ್ನಾಟಕಕ್ಕೆ ಆಗಮಿಸಿದ್ದಾರೆ ಆದರೆ ಕರ್ನಾಟಕದ ಪೋಲಿಸ್ ಹಾಗೂ ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಅತ್ಯಂತ ವ್ಯಾಪಕವಾಗಿ ಹಾಗೂ ವ್ಯವಸ್ಥಿತವಾಗಿ ಕರ್ನಾಟಕದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದ್ದು ಅದನ್ನು ನಿಯಂತ್ರಿಸುವಲ್ಲಿ ಕರ್ನಾಟಕದ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಈ ಸರ್ಕಾರ ಡ್ರಗ್ಸ್ ಪೆಡ್ಲರ್‌ಗಳ ಕೈಯಲ್ಲಿ ಸಿಲುಕಿದೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಶಸ್ತ್ರ ಪಡೆಗಳ ಸಾಮರ್ಥ್ಯ ಬಲಪಡಿಸಲು ಮುಂದಾದ ಸರ್ಕಾರ – 79,000 ಕೋಟಿ ಮೌಲ್ಯದ ಪ್ರಸ್ತಾವನೆಗೆ ಅಸ್ತು
ಯುವ ಸಮೂಹ ಇಂದು ಕರ್ನಾಟಕದಲ್ಲಿ ಡ್ರಗ್ಸ್, ಗಾಂಜಾ, ಅಫಿಮುಗಳಂತಹ ಮಾದಕ ವಸ್ತುಗಳಿಂದ ದಾರಿ ತಪ್ಪುತ್ತಿದ್ದಾರೆ. ಯುವಕರನ್ನು ಸರಿಯಾದ ದಾರಿಗೆ ತರಬೇಕಾದ ಕರ್ತವ್ಯ ರಾಜ್ಯ ಸರ್ಕಾರಕ್ಕೆ ಇರುವಂತೆ ಕಾಣಿಸುತ್ತಿಲ್ಲ. ಇದು ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷತನಕ್ಕೆ ಕನ್ನಡಿ ಹಿಡಿದಂತಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ – ಏಕೈಕ ಮಹಿಳಾ ಅಧಿಕಾರಿಯಾಗಿ ಕರ್ನಾಟಕ ಪ್ರತಿನಿಧಿಸಿದ ಶಾಲಿನಿ ರಜನೀಶ್

