Districts
ಓದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ಬಾವಿಯ ಕಟ್ಟೆಯ ಮೇಲೆ ಓದುತ್ತಾ ಕುಳಿತಿದ್ದ ವಿದ್ಯಾರ್ಥಿನಿಯೋರ್ವಳು ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಅಂಜಲಿ (20) ಎಂದು ಗುರುತಿಸಲಾಗಿದೆ. ಅಂಜಲಿ ಸಾಗರ ತಾಲೂಕಿನ ಉಳ್ಳೂರಿನ ಸಾಗರ ಗಂಗೋತ್ರಿ ಕಾಲೇಜ್ ಆಫ್ ನರ್ಸಿಂಗ್ನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಇಂದು ಮುಂಜಾನೆ ಮನೆಯ ಬಳಿಯಿದ್ದ ಬಾವಿಯ ಕಟ್ಟೆಯ ಮೇಲೆ ಓದುತ್ತಾ ಕುಳಿತಿದ್ದಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
