ಶಿವಮೊಗ್ಗ: ಬಿಸಿಲ ಬೇಗೆಯಿಂದ ಬಸವಳಿದಿದ್ದ ಮಲೆನಾಡಿಗರಿಗೆ ಮಳೆರಾಯ ತಂಪೆರೆದಿದ್ದು, ವರ್ಷದ ಮೊದಲ ಮಳೆಗೆ ಜನಸಾಮಾನ್ಯರನ್ನು ಸಂತಸ ವ್ಯಕ್ತಪಡಿಸಿದ್ದಾರೆ.
ಮಲೆನಾಡಿನ ಹಲವೆಡೆ ಇಂದು ಮಧ್ಯಾಹ್ನದ ವೇಳೆ ಸಾಧಾರಣ ಮಳೆಯಾಗಿದೆ. ಹೊಸನಗರ ತಾಲೂಕಿನ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವರ್ಷದ ಮೊದಲ ಮಳೆ ಕಂಡು ಜನತೆ ಖುಷಿಯಾಗಿದ್ದಾರೆ. ಇದನ್ನೂ ಓದಿ: ಬಿಸಿಲ ಬೇಗೆಯ ಮಧ್ಯೆ ವರುಣ ಸಿಂಚನ- ರಾಜ್ಯದ ಹಲವೆಡೆ ಇಂದು ಮಳೆ
ಅಕಾಲಿಕವಾಗಿ ಅರ್ಧ ಗಂಟೆಗಳ ಕಾಲ ಸಾಧಾರಣ ಮಳೆಯಾಗಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನ ಮಳೆ ಕಂಡು ನಿಟ್ಟುಸಿರು ಬಿಟ್ಟಿದ್ದಾರೆ. ಮಳೆಯಿಂದಾಗಿ ಕೆಲಕಾಲ ವಾಹನ ಸವಾರರು ಪರದಾಡಿದ ಪ್ರಸಂಗವೂ ನಡೆಯಿತು. ದ್ವಿಚಕ್ರ ಸವಾರರು ಅಂಗಡಿ, ಬಸ್ ನಿಲ್ದಾಣಗಳಲ್ಲಿ ಮಳೆಯಿಂದ ರಕ್ಷಿಸಿಕೊಳ್ಳಲು ಆಶ್ರಯ ಪಡೆದರು.