ಶಿವಮೊಗ್ಗ: ಜಿಲ್ಲೆಯಾದ್ಯಂತ (Shivamogga) ಟ್ರಾಫಿಕ್ ಪೊಲೀಸರು ಶಾಲಾ- ಕಾಲೇಜು ವಾಹನಗಳನ್ನು ದಿಢೀರ್ ತಪಾಸಣೆ ನಡೆಸಿದ್ದಾರೆ. ಈ ವೇಳೆ 7 ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸಿರುವುದು (Drunk And Drive) ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 457 ಶಾಲಾ ವಾಹನಗಳನ್ನು ಸಂಚಾರಿ ಠಾಣೆ ಪೊಲೀಸರು (Traffic Police) ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ 7 ಚಾಲಕರು ಕುಡಿದು ವಾಹನ ಚಲಾಯಿಸಿರುವುದು ದೃಢಪಟ್ಟಿದೆ. ಅವರ ವಿರುದ್ಧ ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನ
ಕುಡಿದು ವಾಹನ ಚಲಾಯಿಸುತ್ತಿದ್ದವರ ಚಾಲನಾ ಪರವಾನಗಿ (DL) ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ಪತ್ರ ಬರೆದಿದ್ದಾರೆ.
ವಾಹನಗಳ ಸುಸ್ಥಿತಿಯ ಕುರಿತು ಸಹ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವಾಹನಗಳ ವಿಮೆ, ಎಮಿಷನ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್ ಕಡ್ಡಾಯ ಚಾಲ್ತಿಯಲ್ಲಿ ಇಟ್ಟುಕೊಳ್ಳಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: KSRTC ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
