ಶಿವಮೊಗ್ಗ: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷ ಕೊಲೆ ಪ್ರಕರಣದ ಬಳಿಕ ನಗರದ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು. ಇದೀಗ ಸೋಮವಾರದಿಂದ ಪುನರ್ ಆರಂಭಗೊಳ್ಳುತ್ತಿದೆ.
ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರಜೆ ಘೋಷಿಸಿದ್ದರು. ಇದೀಗ ವಾತಾವರಣ ತಿಳಿಯಾಗುತ್ತಿದ್ದಂತೆ, ನಾಳೆಯಿಂದ ಎಂದಿನಂತೆ ಶಾಲಾ ಕಾಲೇಜು ಆರಂಭವಾಗುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹತ್ಯೆಯಾಗಿರುವ ಹರ್ಷ ಕುಟುಂಬಸ್ಥರಿಗೆ 10ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಸಾಂತ್ವನ
ಶಿವಮೊಗ್ಗದಲ್ಲಿ ನಗರದಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡುವುದಾಗಿ ತಿಳಿಸಿದ್ದು, ಫೆಬ್ರವರಿ 28 ರಿಂದ ಮಾರ್ಚ್ 4 ರವರೆಗೆ 144 ಸೆಕ್ಷನ್ ಮುಂದುವರಿಕೆ ಆಗಲಿದೆ. ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶವಿದ್ದು, ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮುಂದುವರಿಕೆ ಆಗುತ್ತಿದೆ. ಈ ಎಲ್ಲದರ ನಡುವೆ ವರ್ತಕರು ನಿಟ್ಟುಸಿರುವ ಬಿಟ್ಟಿದ್ದು, ಗ್ರಾಹಕರು ನಿರಾಳರಾಗಿದ್ದಾರೆ. ಇದನ್ನೂ ಓದಿ: ಹರ್ಷನ ಕೊಲೆಗೆ ಹಂತಕರು ಸ್ವತಃ ಕುಲುಮೆಯಲ್ಲಿ ಕುಳಿತು ಮಚ್ಚು ರೆಡಿ ಮಾಡಿಸಿದ್ರು!