ಶಿವಮೊಗ್ಗ: ಹೊಸನಗರ ಸಮಟಗಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರತ್ನಕುಮಾರಿ (Ratnakumari) ಅವರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ (National Teachers Award) ಭಾಜನರಾಗಿದ್ದಾರೆ.
ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದ್ದು, ದೇಶಾದ್ಯಂತ ಒಟ್ಟು 48 ಶಿಕ್ಷಕರು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿ ಅವರು ಕೂಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ನೆರವು – ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿಕೆಶಿ ಸಹಿ
ರತ್ನಕುಮಾರಿ ಅವರು ಹೊಸನಗರ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸೆಪ್ಟೆಂಬರ್ 5 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರತ್ನಕುಮಾರಿ ಅವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಇದನ್ನೂ ಓದಿ: ನೈಸ್ ಜಟಾಪಟಿ | ಕೈಮುಗಿದು ಹೇಳುತ್ತೇನೆ ಯುವಕರೇ ಟೋಲ್ ಕಟ್ಟಬೇಡಿ, FIR ಗೆ ಹೆದರಬೇಡಿ – ಹೆಚ್‌ಡಿಕೆ ಕರೆ

