ಶಿವಮೊಗ್ಗ: ಇಂದಿನಿಂದ ಶಿವಮೊಗ್ಗದಿಂದ ಚೆನ್ನೈ (Shivamogga-Chennai) ಮತ್ತು ಹೈದರಾಬಾದ್‌ಗೆ ಸ್ಪೈಸ್ ಜೆಟ್ ವಿಮಾನಯಾನ ಸೇವೆ ಆರಂಭವಾಗಿದೆ. ಚೆನ್ನೈನಿಂದ ಶಿವಮೊಗ್ಗಕ್ಕೆ ಆಗಮಿಸಿದ ಮೊದಲ ಸ್ಪೈಸ್ ಜೆಟ್ ವಿಮಾನಕ್ಕೆ ವಾಟರ್ ಸಲ್ಯೂಟ್ ನೀಡಲಾಯಿತು.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನದ ಶಿವಮೊಗ್ಗ ಮಾರ್ಗಕ್ಕೆ ಚಾಲನೆ ನೀಡಲಾಯಿತು. ಚೆನ್ನೈ–ಶಿವಮೊಗ್ಗ ಮಾರ್ಗದ ಮೊದಲ ಟಿಕೆಟ್ ಖರೀದಿಸಿದ ಪ್ರಯಾಣಿಕರಿಂದಲೇ ದೀಪ ಬೆಳಗಿಸಿ ಹೊಸ ಮಾರ್ಗಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯ ಅಧಿಕಾರಿಗಳು, ವಿಮಾನದ ಸಿಬ್ಬಂದಿ ಹಾಜರಿದ್ದರು. ಇದನ್ನೂ ಓದಿ: ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ
Advertisement
Advertisement
ಇತ್ತ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನಯಾನ ಸೇವೆಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ವಿಮಾನಯಾನ ಸೇವೆಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಶಿವಮೊಗ್ಗ ವಿಮಾನ ನಿಲ್ದಾಣದ ವ್ಯವಸ್ಥಾಪಕ ಸಿ.ಶಮಂತ್, ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
Advertisement
ಚೆನ್ನೈನಿಂದ ಬೆಳಗ್ಗೆ 10:40ಕ್ಕೆ ಹೊರಡಬೇಕಿದ್ದ ವಿಮಾನ ಇಂದು ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಬೆಳಗ್ಗೆ 11:03ಕ್ಕೆ ಹಾರಾಟ ಆರಂಭಿಸಿತು. ಮಧ್ಯಾಹ್ನ ಶಿವಮೊಗ್ಗಕ್ಕೆ ಬಂದಿಳಿಯಿತು. ಈ ಸಂದರ್ಭ ಸ್ಪೈಸ್ ಜೆಟ್ ವಿಮಾನಕ್ಕೆ ಎರಡು ಬದಿಯಿಂದ ನೀರು ಹಾಯಿಸಿ ವಾಟರ್ ಕೆನಾನ್ ಸ್ವಾಗತ ನೀಡಲಾಯಿತು. ಶಿವಮೊಗ್ಗಕ್ಕೆ ಬಂದಿಳಿದ ಪ್ರಯಾಣಿಕರಿಗೆ ಸ್ಪೈಸ್ ಜೆಟ್ ಸಂಸ್ಥೆ ವತಿಯಿಂದ ವಿಶೇಷ ಸ್ವಾಗತ ನೀಡಲಾಯಿತು. ಇದನ್ನೂ ಓದಿ: 3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ
Advertisement
ಹೈದರಾಬಾದ್‌ಗೆ ಪ್ರಯಾಣ, ಸಂಜೆ ಚೆನ್ನೈಗೆ
ಸ್ಪೈಸ್ ಜೆಟ್ ವಿಮಾನವು ಸದ್ಯ ಹೈದರಾಬಾದ್‌ಗೆ ಪ್ರಯಾಣ ಮಾಡಿದೆ. ಸಂಜೆ ಹೈದರಾಬಾದ್‌ನಿಂದ ಹಿಂತಿರುಗಲಿದೆ. ಶಿವಮೊಗ್ಗದಿಂದ ಪುನಃ ಚೆನ್ನೈಗೆ ತೆರಳಲಿದೆ. ಸ್ಪೈಸ್ ಜೆಟ್ ವಿಮಾನವು ಬೆಳಗ್ಗೆ 10:40ಕ್ಕೆ ಚೆನ್ನೈನಿಂದ ಹೊರಟು, ಮಧ್ಯಾಹ್ನ 12:10ಕ್ಕೆ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 12:35ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2:05ಕ್ಕೆ ಹೈದರಾಬಾದ್ ತಲುಪಲಿದೆ. ಮಧ್ಯಾಹ್ನ 2:40ಕ್ಕೆ ಹೈದರಾಬಾದ್‌ನಿಂದ ಹೊರಟು ಸಂಜೆ 4 ಗಂಟೆಗೆ ಶಿವಮೊಗ್ಗ ತಲುಪಲಿದೆ. ಸಂಜೆ 4:25ಕ್ಕೆ ಶಿವಮೊಗ್ಗದಿಂದ ಹೊರಟು ಸಂಜೆ 5:55ಕ್ಕೆ ಚೆನ್ನೈ ತಲುಪಲಿದೆ.