ಶಿವಮೊಗ್ಗ: ವಾರದಲ್ಲಿ ಒಂದು ದಿನ ಸಂಚರಿಸುತ್ತಿರುವ ಶಿವಮೊಗ್ಗ- ಚೆನ್ನೈ ತತ್ಕಾಲ್ ಸ್ಪೆಷಲ್ ಎಕ್ಸ್‌ಪ್ರೆಸ್ ರೈಲು ಇನ್ನು ಮುಂದೆ ಎರಡು ದಿನ ಸಂಚಾರ ಮಾಡಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಬೆಂಗಳೂರಿನ ರೈಲ್ವೆ ವಿಭಾಗೀಯ ಕಚೇರಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ನಾಳೆ ಚಾಲನೆ ನೀಡಲಿದ್ದಾರೆ.
Advertisement
ಈ ರೈಲು ಸೇವೆ ಫೆಬ್ರವರಿ 28ರಿಂದ ವಾರದಲ್ಲಿ ಎರಡು ದಿನ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗದಿಂದ ಪ್ರತಿ ಸೋಮವಾರ ಹಾಗೂ ಶುಕ್ರವಾರ ರಾತ್ರಿ 11:55ಕ್ಕೆ ಹೊರಟು ಮರುದಿನ ಬೆಳಗ್ಗೆ 11:45 ಗಂಟೆಗೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಲಿದೆ.
Advertisement
Advertisement
ಚೆನ್ನೈ ಸೆಂಟ್ರಲ್‍ನಿಂದ ಮಂಗಳವಾರ ಮತ್ತು ಶನಿವಾರ ಮಧ್ಯಾಹ್ನ 3 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 3:55 ಕ್ಕೆ ಶಿವಮೊಗ್ಗ ತಲುಪಲಿದೆ. ಈ ರೈಲಿಗೆ ಮಾರ್ಗ ಮಧ್ಯದಲ್ಲಿ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಬಾಣಸವಾಡಿ ಕೃಷ್ಣರಾಜಪುರ, ಬಂಗಾರಪೇಟೆ, ಜೋಲಾರಪೇಟೆ, ಕಾಟ್ಪಾಡಿ, ಅರಕೋಣಂ ಮತ್ತು ಪೆರಂಬೂರುಗಳಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
Advertisement
ಸಾರ್ವಜನಿಕರು ಶಿವಮೊಗ್ಗ- ಚೆನ್ನೈ ತತ್ಕಾಲ್ ಸ್ಪೆಷಲ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.