ನವದೆಹಲಿ: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಐಸಿಸ್ (ISIS) ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 9 ಜನರ ವಿರುದ್ಧ ಶುಕ್ರವಾರ ಮೊದಲ ಪೂರಕ ಚಾರ್ಜ್‌ಶೀಟ್ (Supplymentary ChargeSheet) ಸಲ್ಲಿಸಿದೆ.
ಆರೋಪಿಗಳು ಭವಿಷ್ಯದಲ್ಲಿ ಭಾರತದಲ್ಲಿಯೇ ಭಯೋತ್ಪಾದಕ ದಾಳಿಯನ್ನು ನಡೆಸುವ ಸಲುವಾಗಿ ರೋಬೊಟಿಕ್ಸ್ (Robotics) ಕೋರ್ಸ್‌ಗಳನ್ನು ಕಲಿಯಲು ಮುಂದಾಗಿದ್ದಾರೆ ಎಂದು ಎನ್‌ಐಎ ತಾನು ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ. ಎನ್‌ಐಎ ಪ್ರಕಾರ, ಆರೋಪಿಗಳು ಐಸಿಸ್ ಜೊತೆಗೂಡಿ ಶಿವಮೊಗ್ಗದಲ್ಲಿ (Shivamogga) ಐಇಡಿ ಟ್ರಯಲ್ ಬ್ಲಾಸ್ಟ್ (Trial Blast) ಮಾಡಿದ್ದರು. ಅಲ್ಲದೇ ಜನರಲ್ಲಿ ಭಯ ಮೂಡಿಸುವ ಸಲುವಾಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಲ್ಲೇ ಮಹಿಳೆ ಜೊತೆ ಕಂಡಕ್ಟರ್ ಸೆಕ್ಸ್- ವೀಡಿಯೋ ವೈರಲ್
Advertisement
Advertisement
ಆರೋಪಿಗಳನ್ನು ಮೊಹಮ್ಮದ್ ಶಾರಿಖ್ (25), ಮಾಜ್ ಮುನೀರ್ ಅಹಮದ್ (23), ಸೈಯದ್ ಯಾಸಿನ್ (22), ರೀಶಾನ್ ತಾಜುದ್ದೀನ್ ಶೇಖ್ (22), ಹುಜೈರ್ ಫರ್ಹಾನ್ ಬೇಗ್ (22), ಮಜಿನ್ ಅಬ್ದುಲ್ ರಹಮಾನ್ (22), ನದೀಮ್ ಅಹಮದ್ ಕೆಎ (22), ಜಬೀವುಲ್ಲಾ (32) ಮತ್ತು ನದೀಮ್ ಫೈಝಲ್ ಎನ್ (27) ಎಂದು ಗುರುತಿಸಲಾಗಿದ್ದು, ಎಲ್ಲರೂ ಕರ್ನಾಟಕಕ್ಕೆ ಸೇರಿದವರಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಬೆಂಗಳೂರಿಗರೇ ಮುಂದು – ಸರಾಸರಿ ಖರೀದಿಯಲ್ಲಿ ಮುಂಬೈ ಫಸ್ಟ್
Advertisement
ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ, ಭಾರತೀಯ ದಂಡ ಸಂಹಿತೆ ಮತ್ತು ವಿನಾಶ ಮತ್ತು ಆಸ್ತಿ ನಷ್ಟ ತಡೆ 1981ರ ಕಾಯ್ದೆಯ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ಆರೋಪಿಗಳ ಪೈಕಿ ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ವಿರುದ್ಧ ಈ ವರ್ಷ ಮಾರ್ಚ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದು, ಈಗ ಇತರ ಆರೋಪಿಗಳ ಕುರಿತು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ
Advertisement
9 ಆರೋಪಿಗಳ ಪೈಕಿ ಮಾಜ್ ಮುನೀರ್ ಅಹಮದ್, ಸೈಯದ್ ಯಾಸಿನ್, ರೀಶಾನ್ ತಾಜುದ್ದೀನ್ ಶೇಖ್, ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹಮದ್ ಕೆಎ ಮೆಕ್ಯಾನಿಕಲ್ (Mechanical) ಮತ್ತು ಎಲೆಕ್ಟ್ರಿಕಲ್ (Electrical) ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಬಸ್ ದುರಂತ – 25 ಮಂದಿ ಸಜೀವ ದಹನ
ಆರೋಪಿಗಳು ರೋಬೊಟಿಕ್ಸ್ ಕಲಿತು ಭವಿಷ್ಯದಲ್ಲಿ ಭಾರತದಲ್ಲಿ ಐಸಿಸ್ ಅಜೆಂಡಾವನ್ನು ಮುಂದುವರಿಸುವ ಸಲುವಾಗಿ ಭಯೋತ್ಪಾದಕ ದಾಳಿಗಳನ್ನು ಮತ್ತು ಅದರ ಕೌಶಲ್ಯವನ್ನು ಕಲಿಯುವಂತೆ ವಿದೇಶಿ ಮೂಲದ ಐಸಿಸ್ ಹ್ಯಾಂಡ್ಲರ್‌ನಿಂದ ಟಾಸ್ಕ್ ನೀಡಲಾಗಿತ್ತು. ಅಲ್ಲದೇ ಮೊಹಮ್ಮದ್ ಶಾರಿಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಭಯೋತ್ಪಾದಕ ಸಂಘಟನೆಯಾದ ಐಎಸ್ ನಿರ್ದೇಶನದ ಮೇರೆಗೆ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಉತ್ತೇಜಿಸಲು ವಿದೇಶದಲ್ಲಿರುವ ಐಎಸ್ ಕಾರ್ಯಕರ್ತರೊಂದಿಗೆ ಶಾಮೀಲಾಗಿ ಕ್ರಿಮಿನಲ್ ಸಂಚುಗಳನ್ನು ರೂಪಿಸಿದ್ದರು ಎಂದು ಎನ್‌ಐಎ ತನಿಖೆಯಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಪತ್ರವನ್ನು ಹರಿದು ಹಾಕಿದ ಮಹಿಳೆ
ರಾಷ್ಟ್ರೀಯ ಭದ್ರತೆ, ಏಕತೆ ಮತ್ತು ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಉದ್ದೇಶದಿಂದ ಮೂವರು ಆರೋಪಿಗಳು ಇತರೆ ಆರೋಪಿಗಳನ್ನು ನೇಮಕ ಮಾಡಿಕೊಂಡಿದ್ದರು. ಅವರ ಆನ್‌ಲೈನ್ ಹ್ಯಾಂಡ್ಲರ್ ಆರೋಪಿಗಳಿಗೆ ಕ್ರಿಪ್ಟೋ ಕರೆನ್ಸಿಗಳ (Crypto Currency) ಮೂಲಕ ಹಣವನ್ನು ನೀಡಲಾಗುತ್ತಿತ್ತು. ಈ ಟ್ರಯಲ್ ಬ್ಲಾಸ್ಟ್ ಕುರಿತು ಸೆಪ್ಟೆಂಬರ್ 19 2023ರಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ನವೆಂಬರ್ 15ರಂದು ಈ ಪ್ರಕರಣವನ್ನು ಎನ್‌ಐಎ ತೆಗೆದುಕೊಂಡು ಕೇಸ್ ಅನ್ನು ಮರುದಾಖಲಿಸಿತ್ತು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್
Web Stories