ಯತ್ನಾಳ್ ಸವಾಲು ಸ್ವೀಕಾರ – ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ

Public TV
2 Min Read
Shivanand Patil

ಬೆಂಗಳೂರು\ವಿಜಯಪುರ: ಬಸವನ ಬಾಗೇವಾಡಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ (Shivanand Patil) ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅವರ ಸವಾಲನ್ನು ಸ್ವೀಕರಿಸಿದ್ದಾರೆ.

Basanagouda Patil Yatnal

ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಸಚಿವ ಶಿವಾನಂದ ಪಾಟೀಲ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಶುಕ್ರವಾರ ಹಸ್ತಾಂತರಿಸಿದ್ದಾರೆ. ಆದರೆ ರಾಜೀನಾಮೆ ಪತ್ರ ಸರಿಯಾದ ಕ್ರಮದಲ್ಲಿ ಇಲ್ಲದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆ ಕೇಸ್ ವಿಚಾರದಲ್ಲಿ ಬಿಜೆಪಿಯವ್ರು ಬೆಂಕಿ ಹಚ್ಚೋದು ಬೇಡ – ದಿನೇಶ್ ಗುಂಡೂರಾವ್

ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕೊಲೆಗಡುಕರು, ಅತ್ಯಾಚಾರಿಗಳು ಸಿಕ್ಕರೆ ಎನ್‌ಕೌಂಟರ್‌ ಮಾಡಿ: ಹಿಂದೂ ಕಾರ್ಯಕರ್ತನ ಹತ್ಯೆಗೆ ಯತ್ನಾಳ್‌ ಖಂಡನೆ

ಪಾಟೀಲ್ ಹೆಸರು ಇಟ್ಟುಕೊಂಡು ಸಮುದಾಯದ ಹೆಸರಲ್ಲಿ ಚುನಾವಣೆ ಗೆದ್ದಿದ್ದಾರೆ. ಅವರ ಅಪ್ಪನಿಗೆ ಹುಟ್ಟಿದ್ರೆ ಶುಕ್ರವಾರದೊಳಗೆ ರಾಜೀನಾಮೆ ಕೊಡಲಿ ಎಂಬ ಯತ್ನಾಳ್ ಹೇಳಿಕೆಗೆ ಸಿಟ್ಟಿಗೆದ್ದು ಶಿವಾನಂದ ಪಾಟೀಲ್ ರಾಜೀನಾಮೆ ಕೊಟ್ಟಿದ್ದಾರೆ.

ಇದರಿಂದಾಗಿ ಯತ್ನಾಳ್‌ರನ್ನ ಇಕ್ಕಟ್ಟಿನಲ್ಲಿ ಸಿಲುಕಿಸುವ ಪ್ಲ್ಯಾನ್ ಮಾಡಿರುವ ಶಿವಾನಂದ ಪಾಟೀಲ್, ರಾಜಕೀಯವಾಗಿ ಟಾರ್ಗೆಟ್ ಫಿಕ್ಸ್ ಮಾಡಿ ಯತ್ನಾಳ್ ಬಾಯಿ ‌ಮುಚ್ಚಿಸಲು ಮಾಡಿರುವ ತಂತ್ರ ಎನ್ನಲಾಗುತ್ತಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೆ ಪಾಕಿಸ್ತಾನ್ ಜಿಂದಾಬಾದ್ ಕಾರಣ: ಆರ್.ಅಶೋಕ್ ಕಿಡಿ

ಶಿವಾನಂದ ಪಾಟೀಲ್ ರಾಜೀನಾಮೆ ಪತ್ರದಲ್ಲೇನಿದೆ?

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ, ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

ಯತ್ನಾಳ್‌ ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಸಚಿವ ಶಿವಾನಂದ ಪಾಟೀಲ್‌ ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಹತ್ಯೆ ಮಾಡಿದವರಿಗೆ ಕಠಿಣ ಕ್ರಮ ಆಗಲಿದೆ: ಪರಮೇಶ್ವರ್

Share This Article