ಕಮಲ್ ಹುಟ್ಟು ಹಬ್ಬದ ಪಾರ್ಟಿಯಲ್ಲಿ ಭಾಗಿಯಾದ ಶಿವಣ್ಣ

Public TV
2 Min Read
Shivraj Kumar

ಭಾರತೀಯ ಸಿನಿಮಾ ರಂಗದ ಖ್ಯಾತ ತಾರೆ ಕಮಲ್ ಹಾಸನ್ ನಿನ್ನೆ ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅವರ ಹುಟ್ಟು ಹಬ್ಬದ ಸಮಾರಂಭದಲ್ಲಿ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಸುಹಾಸಿನಿ, ಖುಷ್ಬೂ, ಆಮೀರ್ ಖಾನ್, ಸೂರ್ಯ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದರು. ನೆಚ್ಚಿನ ನಟನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.

Kamal Haasan 1

ಕಮಲ್ ಹಾಸನ್ ಹುಟ್ಟು ಹಬ್ಬ (Birthday). ಈ ಸಡಗರವನ್ನು ಇನ್ನಷ್ಟು ಹೆಚ್ಚಿಸುವುದಕ್ಕಾಗಿ ಅವರ ನಟನೆಯ 234ನೇ ಸಿನಿಮಾದ ಟೈಟಲ್ ಘೋಷಣೆ ಆಗಿದೆ. ಮಣಿರತ್ನಂ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ‘ಥಗ್ ಲೈಫ್’ (Thug’s Life) ಎಂದು ಹೆಸರಿಡಲಾಗಿದೆ. ಶೀರ್ಷಿಕೆಯ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದೆ.

Kamal Haasan Mani Ratnam 3

ಶಿವಣ್ಣ ನಟನೆ?

ಜೈಲರ್ ಸಿನಿಮಾದ ಯಶಸ್ಸಿನ ನಂತರ ತಮಿಳಿನಲ್ಲಿ ಶಿವರಾಜ್ ಕುಮಾರ್ (Shivaraj Kumar) ಬೇಡಿಕೆ ಹೆಚ್ಚಾಗಿದೆ. ಜೈಲರ್ ಸಿನಿಮಾದ ಜೊತೆ ಜೊತೆಗೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದರು. ಇದೀಗ ಕಮಲ್ ಹಾಸನ್ ನಟನೆಯ ಹೊಸ ಸಿನಿಮಾದಲ್ಲೂ ಶಿವರಾಜ್ ಕುಮಾರ್ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ಶಿವಣ್ಣ ಜೊತೆ ಮಾತುಕತೆ ಕೂಡ ನಡೆದಿದೆ ಎನ್ನುವ ಸುದ್ದಿಯಿದೆ.

Kamal Haasan 3

ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ ಎನ್ನಲಾದ ಸಿನಿಮಾ ವಿಶೇಷವಾಗಿದೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ.

kamal haasan vikram film 5

ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

 

ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

Share This Article