ಆರ್.ಚಂದ್ರು ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಫಾದರ್ ಸಿನಿಮಾದ ಮುಹೂರ್ತ ನಾಳೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಬೆಳಗ್ಗೆ 11 ಗಂಟೆಗೆ ನೆರವೇರಲಿದೆ. ಈ ಅದ್ಧೂರಿ ಸಮಾರಂಭಕ್ಕೆ ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ (Geeta Shivaraj Kumar) ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ರಾಮಚಂದ್ರ ಗೌಡ, ಮಂಜುನಾಥ್ ಹೆಗಡೆ, ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅತಿಥಿಗಳಾಗಿ ಆಗಮಿಸುತ್ತಿದ್ದು, ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿ ಅಮೃತಾ ಅಯ್ಯಂಗಾರ, ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರಕಾಶ್ ರಾಜ್, ಸುನಿಲ್ ಸೇರಿದಂತೆ ಹಲವಾರು ನಟ ನಟಿಯರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ.
Advertisement
ಆರ್.ಸಿ. ಸ್ಟುಡಿಯೋಸ್. ಇದು ಆರ್ ಚಂದ್ರು (R. Chandru) ಅವರ ಬಹುದೊಡ್ಡ ಕನಸು. ಇದೊಂದು ಪ್ಯಾನ್ ಇಂಡಿಯಾ ಬ್ಯಾನರ್. ಕನ್ನಡಕ್ಕೆ ಸೀಮಿತವಾಗಿದ್ದ ಶ್ರೀ ಸಿದ್ದೇಶ್ವರ ಮೂವೀಸ್ ಬ್ಯಾನರ್ ಅನ್ನು ಸೇರಿಸಿಕೊಂಡೇ ಆರ್.ಸಿ. ಸ್ಟುಡಿಯೋಸ್ ಹುಟ್ಟು ಕಂಡಿದೆ. ಈವರೆಗೆ ಸ್ಟಾರ್ ನಟರ ಐದು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಆರ್.ಚಂದ್ರು, ಈಗ ಆರ್.ಸಿ. ಸ್ಟುಡಿಯೋಸ್ ಸಂಸ್ಥೆ ಮೂಲಕ ಒಟ್ಟಾರೆ ಆರು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಅನೌನ್ಸ್ ಮಾಡಿದ್ದಾರೆ. ಅವೆಲ್ಲವೂ ಬಿಗ್ ಬಜೆಟ್ ಸಿನಿಮಾಗಳು, ಬಿಗ್ ಸ್ಟಾರ್ಸ್ ಸಿನಿಮಾಗಳು ಅನ್ನೋದು ವಿಶೇಷ. ಆ ಸಾಲಿನಲ್ಲಿರುವ ಸಿನಿಮಾಗಳ ಪೈಕಿ ‘ಫಾದರ್’ (Father) ಎಂಬ ಆರನೇ ಸಿನಿಮಾ ಏಪ್ರಿಲ್ 27ರಂದು ಅದ್ಧೂರಿಯಾಗಿ ಮುಹೂರ್ತ ನೆರವೇರುತ್ತಿದೆ. ಹುಡುಗಿಯರ ಪಾಲಿನ ಪ್ರೀತಿಯ ಡಾರ್ಲಿಂಗ್ ಎನಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಪಂಚಭಾಷೆ ನಟ ಪ್ರಕಾರ್ ರೈ (Prakash Raj) ಈ ಚಿತ್ರದ ಮುಖ್ಯ ಆಕರ್ಷಣೆ.
Advertisement
Advertisement
ಈ ಸಿನಿಮಾದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಅಪ್ಪ- ಮಗನ ಬಾಂಧವ್ಯ ಕುರಿತಾದ ಕಥಾಹಂದರ ಹೊಂದಿರುವ ಸಿನಿಮಾ. ಅಪ್ಪನ ಮೌಲ್ಯ ಸಾರಿದ್ದ ಆರ್. ಚಂದ್ರು ಅವರ ಮೊದಲ ಸೂಪರ್ ಹಿಟ್ ಸಿನಿಮಾ ತಾಜ್ ಮಹಲ್ ಇಂದಿಗೂ ಕಾಡುತ್ತೆ. ಫಾದರ್ ಕೂಡ ಅಂಥದ್ದೇ ಕಂಟೆಂಟ್ ಹೊಂದಿರುವ ಸಿನಿಮಾ ಅನ್ನೋ ಫೀಲ್ ಹೆಸರಲ್ಲೇ ಇದೆ. ಮೊದಲಿಂದಲೂ ಆರ್. ಚಂದ್ರು ಕಂಟೆಂಟ್‌ಗೆ ಒತ್ತು ಕೊಟ್ಟವರು. ಈ ಫಾದರ್ ಕೂಡ ಅದಕ್ಕೆ ಹೊರತಾಗಿರಲ್ಲ ಎಂಬ ಭಾವನೆ ನಮ್ಮದು. ಸದ್ಯಕ್ಕೆ ಫಾದರ್ ಏಪ್ರಿಲ್ 27 ರಂದು ಸೆಟ್ಟೇರುತ್ತಿದೆ. ಅಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ಸಿಗಲಿದೆ.
Advertisement
ಸಿನಿಮಾ ಅನ್ನೋದಕ್ಕೆ ದೊಡ್ಡ ಶಕ್ತಿ ಇದೆ. ಅಳು-ನಗುವಿನ ಸಂಕೇತವಿದ್ದರೂ ಅಲ್ಲೆಲ್ಲೋ ಒಂದು ಕಡೆ ಆಪ್ತವೆನಿಸೋ ಅಂಶಗಳು ನೋಡುಗರನ್ನು ಬಿಗಿದಪ್ಪುತ್ತವೆ. ಈ ಫಾದರ್ ಸಿನಿಮಾ ಕೂಡ ಎದೆ ಭಾರವೆನಿಸುವ ಚಿತ್ರ. ಮನಸ್ಸಿಗೆ ಖುಷಿ ಕೊಡುವ, ಕಣ್ಣಲ್ಲಿ ಆನಂದಭಾಷ್ಪ ತರುವ ಮತ್ತೆ ಮತ್ತೆ ಕಾಡುವ, ಏನೋ ಕಳೆದುಕೊಂಡ ಸಂಕಟ, ಇನ್ನೇನ್ನನ್ನೋ ಪಡೆಯಬೇಕೆಂಬ ಹಂಬಲ, ಮತ್ತೇನೋ ಉಳಿಸಿಕೊಳ್ಳಬೇಕೆಂಬ ಹಠ ಇವೆಲ್ಲದರ ಸಮ್ಮಿಶ್ರಣವೇ ಫಾದರ್ ಅಂತೆ.
ಇಲ್ಲಿ ನೋವಿದೆ, ನಲಿವಿದೆ. ಬಾಂಧವ್ಯದ ಹೂರಣವಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಸ್ತವದ ತಿರುಳಿದೆ. ಪ್ರತಿಯೊಬ್ಬರ ಮನಸ್ಸಿಗೂ ನಾಟುವ ಅಂಶವಿದೆ. ಕಣ್ಣಿಗೆ ಕಟ್ಟುವ ಚಿತ್ರಣವೂ ಇರಲಿದೆ. ಫಾದರ್ ಪ್ರತಿಯೊಬ್ಬರ ಮನಸ್ಸನ್ನು ಹಗುರಾಗಿಸೋ ಚಿತ್ರವಾದರೂ, ಏನೋ ಒಂದು ಮಿಸ್ ಆಯ್ತು ಅನ್ನೋ ಭಾವನೆಯ ಚಿತ್ರ ಇದಾಗಲಿದೆ. ಆರ್.ಸಿ. ಸ್ಟುಡಿಯೋದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿರುವುದರಿಂದ ಸ್ಟುಡಿಯೋ ಮುಖ್ಯಸ್ಥ ಆರ್.ಚಂದ್ರು ಒಂದೊಳ್ಳೆಯ ಕಂಟೆಂಟ್ ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಜಗತ್ತಿನಲ್ಲಿ ಅಪ್ಪನ ಸ್ಥಾನ ತುಂಬೋಕೆ ಯಾರಿಂದಲೂ ಸಾಧ್ಯವಿಲ್ಲ. ಅಪ್ಪ ಅನ್ನೋದು ಆಕಾಶಕ್ಕಿಂತಲೂ ಮಿಗಿಲು. ಅಪ್ಪನ ಬಿಸಿಯುಸಿರು, ಅಪ್ಪನ ಅಪ್ಪುಗೆ, ಅಪ್ಪನ ನೋವು, ಅಪ್ಪನ ಬೆವರು, ಅಪ್ಪನ ಕಾತರ, ಆತುರ, ಚಡಪಡಿಕೆ, ಆಸೆ, ಜವಾಬ್ದಾರಿ ಇತ್ಯಾದಿಗಳ ರೂಪವೇ ಈ ಫಾದರ್ ಅಂತಂದುಕೊಂಡರೂ ಅದಕ್ಕಿಂತಲೂ ಮಿಗಿಲಾಗಿದ್ದು ಈ ಫಾದರ್ ಒಳಗಿದೆ. ಇದು ಎಲ್ಲರಿಗೂ ಇಷ್ಟವಾಗುವ ಚಿತ್ರವಾಗುತ್ತೆ ಎಂಬ ಭರವಸೆ ಆರ್ ಸಿ ಸ್ಟುಡಿಯೋದ್ದು.