ಪುತ್ರಿ ನಿವೇದಿತಾ ನಿರ್ಮಾಣದ ಚಿತ್ರದಲ್ಲಿ ಶಿವಣ್ಣ ಅತಿಥಿ

Public TV
1 Min Read
Shivaraj kumar 2

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಪುತ್ರಿ ನಿವೇದಿತಾ (Niveditha) ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಈ ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅತಿಥಿ ಪಾತ್ರ ಅದಾಗಿದ್ದರೂ, ಅದೊಂದು ಮಹತ್ವದ ಕ್ಯಾರೆಕ್ಟರ್ ಎಂದು ಹೇಳಲಾಗುತ್ತಿದೆ.

Shivaraj kumar 1

ಈ ಹಿಂದೆ ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಾಗೂ ದ್ವಿತೀಯ ಹಂತ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಂದುಕೊಂಡಂತೆಯೇ ಶೂಟಿಂಗ್ ಕೆಲಸಗಳು ಮುಗಿಯುತ್ತಿವೆ ಎನ್ನುತ್ತಿದೆ ಚಿತ್ರತಂಡ.

FIREFLY

ಫೈರ್ ಫ್ಲೈ (Fire Fly)ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

FIREFLY 1

ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್.ಕೆ ಸಂಸ್ಥೆಯ ಮಾಯಾಬಜಾರ್ (Mayabazar) ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ (Pentagan) ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ರು.

 

ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

Share This Article