– ವೀಡಿಯೋ ಮೂಲಕ ಹೆಲ್ತ್ ಅಪ್ಡೇಟ್ ನೀಡಿದ ಡಾಕ್ಟರ್
ವಾಷಿಂಗ್ಟನ್: ಡಾ. ಶಿವರಾಜ್‌ಕುಮಾರ್ (Shiva Rajkumar) ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯ ಡಾ.ಮುರುಗೇಶ್ ಮನೋಹರನ್ (Murugesh Manoharan) ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆ ಬಳಿಕ ವೀಡಿಯೋ ಮೂಲಕ ಮಾತನಾಡಿದ ಅವರು, ದೇವರ ದಯೆಯಿಂದ ಹಾಗೂ ಹಲವರ ಆಶೀರ್ವಾದ ಹಾಗೂ ಪ್ರಾರ್ಥನೆಯಿಂದ ಸರ್ಜರಿ ಯಶಸ್ವಿಯಾಗಿದೆ. ಪ್ರಮುಖ ಹಂತ ಪೂರ್ಣಗೊಂಡಿದೆ. ಶಿವಣ್ಣ ಚೆನ್ನಾಗಿ ಸ್ಪಂದಿಸಿದ್ದಾರೆ. ಸರ್ಜರಿ ನಂತರವೂ ಆರಾಮಾಗಿದ್ದಾರೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ. ನಿಮ್ಮ ಬೆಂಬಲಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ
ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ