ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಯುವ ಸಿನಿಮೋತ್ಸಾಹಿಗಳಿಗೆ ಸದಾ ಬೆನ್ನು ತಟ್ಟುತ್ತಾ ಮುಂದೆ ಸಾಗುವ ಕನ್ನಡ ಚಿತ್ರರಂಗದ ಮಾಸ್ ಲೀಡರ್. ಹೊಸ ಚಿತ್ರತಂಡಕ್ಕೆ ಬಲವಾಗಿ ನಿಲ್ಲುವ ಶಿವಣ್ಣನ ಹಾದಿಯಲ್ಲಿ ಮಗಳು ನಿವೇದಿತಾ (Niveditha) ಕೂಡ ಹೆಜ್ಜೆ ಇಟ್ಟಿದ್ದಾರೆ. ಹೇಳಿ ಕೇಳಿ ಕಲೆ ದೊಡ್ಮನೆ ಕುಟುಂಬದಲ್ಲಿ ರಕ್ತಗತವಾಗಿ ಬಂದಿದೆ. ಇಡೀ ಕುಟುಂಬ ಕಲಾಸೇವೆಯಲ್ಲಿ ನಿರತರಾಗಿದ್ದಾರೆ. ಅಂದು ಅಣ್ಣಾವ್ರು ತೆರೆಮೇಲೆ ರಾರಾಜಿಸುತ್ತಿದ್ದರೆ, ತೆರೆ ಹಿಂದೆ ಅವರ ಬೆನ್ನೆಲುಬಾಗಿ ನಿರ್ಮಾಣ ಸಂಸ್ಥೆಯಡಿ ದುಡಿಯುತ್ತಿದ್ದವರು ಪಾರ್ವತಮ್ಮ ಪೂರ್ಣಿಮಾ ಎಂಟರ್ ಪ್ರೈಸನ್ ನಡಿ ಪಾರ್ವತಮ್ಮ ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್ ಡೂಪರ್ ಹಿಟ್ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅದೇ ಲೆಗಸಿ ಈಗ ಮುಂದುವರೆದಿದೆ.
Advertisement
ಗೀತಾ ಪಿಕ್ಚರ್ಸ್ ನಡಿ ಗೀತಾ ಶಿವರಾಜ್ ಕುಮಾರ್, ಪಿಆರ್ಕೆ ಪ್ರೊಡಕ್ಷನ್ ನಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿ ಚಿತ್ರರಂಗಕ್ಕೆ ದುಡಿಯುತ್ತಿದ್ದಾರೆ. ಈಗ ಶಿವಣ್ಣನ ದ್ವಿತೀಯ ಪುತ್ರಿ ನಿವೇದಿತಾ ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯಡಿ ಚೊಚ್ಚಲ ಚಿತ್ರ ನಿರ್ಮಾಣಕ್ಕಿಳಿದಿದ್ದಾರೆ. ಇದನ್ನು ಓದಿ:ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕಿರೀಟಕ್ಕೆ ಮತ್ತೊಂದು ಗರಿ
Advertisement
Advertisement
ಶ್ರೀ ಮುತ್ತು ಸಿನಿ ಸರ್ವಿಸ್ ನಿವೇದಿತಾ ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ವೇದಿಕೆ ನೀಡಲೆಂದು ಸೃಷ್ಟಿಯಾಗಿರುವ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಡಿ ಈಗಾಗಲೇ ಧಾರಾವಾಹಿ- ಮೂರು ವೆಬ್ ಸೀರೀಸ್ಗಳು ಹೊರ ಬಂದಿವೆ. ಈಗ ಇದೇ ಬ್ಯಾನರ್ ನಡಿ ನಿವೇದಿತಾ ಸಿನಿಮಾ ನಿರ್ಮಾಣಕ್ಕೆ (Produce) ಮುಂದಾಗಿದ್ದಾರೆ. ಹೊಂಬಿಸಿಲ ಕಿರಣಗಳಲ್ಲಿ ತಂಗಾಳಿಯೊಂದು ಮೂಡಿದೆ, ಹುಟ್ಟು ಸಾವಿನ ಸ್ವಾರಸ್ಯವನ್ನು ಅನ್ವೇಷಿಸಲು ಹೊರಟಿದೆ. ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ ಎಂಬ ಪೋಸ್ಟರ್ ಮೂಲಕ ತಮ್ಮ ಹೊಸ ಹೆಜ್ಜೆಯ ಬಗ್ಗೆ ತಿಳಿಸಿದ್ದಾರೆ.
Advertisement
ನಿವೇದಿತಾ ಒಡೆತನದ ಶ್ರೀ ಮುತ್ತು ಸಿನಿ ಸರ್ವಿಸ್ ನಡಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾಗೆ ವಂಶಿ ಸಾರಥಿ. ಈ ಹಿಂದೆ ‘ಮಾಯಾಬಜಾರ್’ ಸಿನಿಮಾದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ವಂಶಿ ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಟನಾಗಿ ಬರುತ್ತಿದ್ದಾರೆ. ಜೊತೆಗೆ ನಿರ್ದೇಶನ ಕೂಡ ಮಾಡ್ತಿದ್ದಾರೆ.
ಲೈಫ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬಾನ ದಾರಿಯಲಿ’ ಸಿನಿಮಾದ ಛಾಯಾಗ್ರಹಕ ಅಭಿಲಾಷ್ ಕಲ್ಲಟ್ಟಿ ಕ್ಯಾಮೆರಾ ಸೆರೆಹಿಡಿಯಲಿದ್ದು, ಚರಣ್ ರಾಜ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಜಯ್ ರಾಮ್ ಕೋ-ಡೈರೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ.