ಶಕ್ತಿಧಾಮಕ್ಕೆ ಭೇಟಿಕೊಟ್ಟ ಶಿವರಾಜ್‍ಕುಮಾರ್ ದಂಪತಿ

Public TV
1 Min Read
Shiva Rajkumar 4

ಮೈಸೂರು: ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ ಭೆಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ವಿಚಾರಿಸಿದ್ದಾರೆ.

Shivarajkumar

ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ಮಾಡಿದ್ದಾರೆ. ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದೆ. ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. 150 ಮಕ್ಕಳ ಹಾರೈಕೆ, ಶಿಕ್ಷಣ ಕುರಿತಂತೆ ಚರ್ಚೆ ನಡೆಸಲಾಗಿದೆ. ಶಕ್ತಿಧಾಮಕ್ಕೆ ದೊಡ್ಡ ಮಟ್ಟದಲ್ಲಿ ಸಾಥ್ ನೀಡಿದ್ದ ಅಪ್ಪು ನಿಧನದ ಬಳಿಕ ಮೊದಲ ಬಾರಿಗೆ ಭೇಟಿ ನೀಡಿ ಮಕ್ಕಳೊಂದಿಗೂ ಚರ್ಚೆ ಮಾಡಿದ್ದಾರೆ. ಇದನ್ನೂ ಓದಿ: ಮದುವೆಗೆ 1 ಲಕ್ಷ ರೂ. ವೆಚ್ಚದ ಮಹಂದಿ ಬಳಸ್ತಿದ್ದಾರಂತೆ ಕತ್ರಿನಾ!

Shakthidhama

ಮೈಸೂರು ನಗರದ ಉಡ್ ಲ್ಯಾಂಡ್ ಸಿನುಮಾ ಮಂದಿರಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ರಾಜ್‍ಕುಮಾರ್ ಭಾವ ಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿದ್ದಾರೆ. ಪುಷ್ಪಾರ್ಚನೆ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಟ ಶಿವಣ್ಣನಿಗೆ ಜೈಕಾರ ಕೂಗಿದ ಅಭಿಮಾನಿಗಳು. ಮೈಸೂರು ನಗರದಲ್ಲಿರೋ ಚಿತ್ರಮಂದಿರದಲ್ಲಿ ಈ ವೇಳೆ ಅಭಿಮಾನಿಗಳಿಂದ ನೂಕುನುಗ್ಗಲು ಆಗಿದೆ. ಇದನ್ನೂ ಓದಿ: ಯಶ್‌, ಪ್ರಶಾಂತ್‌ ನೀಲ್‌ ಬಳಿ ಕ್ಷಮೆ ಕೇಳಿದ ಅಮೀರ್‌ ಖಾನ್‌

Share This Article