‘ಘೋಸ್ಟ್’ ಚಿತ್ರದ ಬಿಗ್ ಡ್ಯಾಡಿ ಪೋಸ್ಟರ್ ಔಟ್- ಕಿಕ್ ಕೊಡ್ತಿದೆ ಶಿವಣ್ಣ ಲುಕ್

Public TV
2 Min Read
shivanna

ನ್ನಡದ ಬ್ಯುಸಿಯೇಷ್ಟ್ ನಟ ಅಂದರೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ಇದೀಗ ‘ಘೋಸ್ಟ್’ (Ghost) ಸಿನಿಮಾ ಬಿಗ್ ಡ್ಯಾಡಿ ಪೋಸ್ಟರ್ ಮೂಲಕ ಶಿವಣ್ಣ ಗಮನ ಸೆಳೆಯುತ್ತಿದ್ದಾರೆ. ಘೋಸ್ಟ್ ಸಿನಿಮಾ ನಿರ್ದೇಶಕ ಶ್ರೀನಿ (ಜುಲೈ 9) ಅವರ ಹುಟ್ಟುಹಬ್ಬದಂದು ಶಿವಣ್ಣ ಫ್ಯಾನ್ಸ್ ಹ್ಯಾಪಿ ನ್ಯೂಸ್‌ವೊಂದನ್ನ ಹಂಚಿಕೊಂಡಿದ್ದಾರೆ.

shivanna 1 1

ಶಿವರಾಜ್‌ಕುಮಾರ್ (Shivarajkumar) ಅವರು ಕನ್ನಡ ಸಿನಿಮಾಗಳ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಮಿಂಚ್ತಿದ್ದಾರೆ. ಕೈತುಂಬಾ ಸಿನಿಮಾಗಳಿವೆ. ಸದ್ಯ ಘೋಸ್ಟ್ ಸಿನಿಮಾದ ಲುಕ್‌ನಿಂದ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಬಿಗ್ ಡ್ಯಾಡಿ ಎಂಬ ಪೋಸ್ಟರ್ ಲುಕ್‌ನಿಂದ ಶಿವಣ್ಣ ಕಿಕ್ ಕೊಡ್ತಿದ್ದಾರೆ. ಅದರ ಜೊತೆಗೆ ಈ ಬಿಗ್ ಡ್ಯಾಡಿ ಅಂದರೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕೌತುಕ ಮೂಡುವ ಹಾಗೇ ಮಾಡಿದ್ದಾರೆ.

shrini shivanna

ಇದೇ ಜುಲೈ 12ರಂದು ಎನರ್ಜಿಟಿಕ್ ಹೀರೋ ಶಿವಣ್ಣ ಅವರ ಜನ್ಮದಿನ. ಪ್ರತಿ ವರ್ಷದಂತೆ ಈ ಬಾರಿ ಕೂಡ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಲಿದ್ದಾರೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಲು ‘ಘೋಸ್ಟ್’ ಸಿನಿಮಾ ತಂಡದಿಂದ ‘ಬಿಗ್ ಡ್ಯಾಡಿ’ ವೀಡಿಯೋ ರಿಲೀಸ್ ಆಗಲಿದೆ. ಅಂದು ಬೆಳಗ್ಗೆ 11.45ಕ್ಕೆ ಬಿಗ್ ಡ್ಯಾಡಿ ಪರಿಚಯ ಆಗಲಿದೆ. ಈ ಮೂಲಕ ಬಿಗ್ ಡ್ಯಾಡಿ ಅಂದರೆ ಏನು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

ಈ ಪೋಸ್ಟರ್‌ನಲ್ಲಿ ಶಿವಣ್ಣ ಅವರು ರೈಫಲ್ ಹಿಡಿದು ನಿಂತಿದ್ದಾರೆ. ಈ ಸಿನಿಮಾ ಸಖತ್ ಮಾಸ್ ಆಗಿರಲಿದೆ ಎಂಬುದಕ್ಕೆ ಸುಳಿವು ಸಿಕ್ಕಿದೆ. ಇಂದು (ಜುಲೈ 9) ನಿರ್ದೇಶಕ ಎಂ.ಜಿ. ಶ್ರೀನಿವಾಸ್ (Director Shrinivas) ಅವರ ಬರ್ತ್‌ಡೇಯಂದು ಪೋಸ್ಟರ್ ರಿವೀಲ್ ಆಗಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡ ಚಿತ್ರರಂಗದಲ್ಲಿ ಶ್ರೀನಿ ಅವರು ನಟನಾಗಿ, ನಿರ್ದೇಶಕನಾಗಿ ಹೆಸರು ಮಾಡಿದ್ದಾರೆ. ‘ಘೋಸ್ಟ್’ ಚಿತ್ರದಲ್ಲಿ ಅವರು ಶಿವಣ್ಣ ಜೊತೆ ಕೈ ಜೋಡಿಸಿರುವುದರಿಂದ ಹೈಪ್ ಹೆಚ್ಚಾಗಿದೆ. ಇದನ್ನೂ ಓದಿ:ಹಿರಿಯ ನಟಿ ಲೀಲಾವತಿ ಮನೆಗೆ ಉಮಾಶ್ರೀ- ಪದ್ಮಾವಾಸಂತಿ ಭೇಟಿ

ಶಿವಣ್ಣ ಜೊತೆ ಜಯರಾಂ, ಅನುಪಮ್ ಖೇರ್, ಸತ್ಯಪ್ರಕಾಶ್, ದತ್ತಣ್ಣ, ಅಭಿಜಿತ್ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ತೆರೆಗೆ ಬರಲಿದೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article