ಕಾರವಾರ: ಮಾಜಿ ಸಿಎಂ ದಿ.ಎಸ್ ಬಂಗಾರಪ್ಪನವರ (S.Bangarappa) ಜನ್ಮ ದಿನದ ಹಿನ್ನಲೆಯಲ್ಲಿ ನಟ ಶಿವರಾಜ್‌ಕುಮಾರ್ (Shivarajkumar) ಕುಟುಂಬ ಸಮೇತರಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ (Sirsi Marikamba Temple) ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವರಾಜ್‌ಕುಮಾರ್ ಪತ್ನಿ ಹಾಗೂ ಬಂಗಾರಪ್ಪನವರ ಮಗಳಾದ ಗೀತಾ ಶಿವರಾಜಕುಮಾರ್ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಹಾಗೂ ಶಿರಸಿ ಶಾಸಕ ಹಾಗೂ ಬಂಗಾರಪ್ಪನವರ ಬಾವ ಭೀಮಣ್ಣ ನಾಯ್ಕ್ ಅವರು ಸಹ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗವಹಿಸಿದ್ದರು.
- Advertisement3
- Advertisement
ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಶಿವಾನಂದ ಶೆಟ್ಟಿ, ಸುಧೀರ್ ಹಂದ್ರಾಳ ಸೇರಿದಂತೆ ಹಲವಾರು ಅಭಿಮಾನಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು.