ಕಾರವಾರ: ಮಾಜಿ ಸಚಿವ ವಿಶ್ವನಾಥ್ (H.Vishwanath) ಅವರು ಕಾಂಗ್ರೆಸ್ (Congress) ಸೇರುವ ಕುರಿತು ಅವರ ಮನವೊಲಿಸಲು ನಾನು ಯಾವುದೇ ಮುಂದಾಳತ್ವವನ್ನ ವಹಿಸಿಕೊಳ್ಳಲ್ಲ ಎಂದು ಸಚಿವ ಶಿವರಾಮ ಹೆಬ್ಬಾರ್ (Shivaram Hebbar) ಹೇಳಿದರು.
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರನ್ನು ಹೆಚ್.ವಿಶ್ವನಾಥ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಚುನಾವಣೆ ಹೊಸ್ತಿಲಲ್ಲೇ ವಿಶ್ವನಾಥ್ ಅವರು ಮತ್ತೆ ಕಾಂಗ್ರೆಸ್ ಸೇರಬಹುದು ಎಂಬ ಮಾತು ಕೇಳಿಬರುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಹೆಬ್ಬಾರ್, ವಿಶ್ವನಾಥ್‌ರನ್ನು ಕಾಂಗ್ರೆಸ್ ಸೇರಬೇಡಿ ಎಂದು ಮನವೊಲಿಸಲು ನಾನು ಮುಂದಾಳತ್ವ ವಹಿಸಲ್ಲ ಎಂದಿದ್ದಾರೆ. ಇದನ್ನೂ ಓದಿ: ಆಡಳಿತದಲ್ಲಿ ಗುಜರಾತ್ ಮಾದರಿ, ಟಿಕೆಟ್ ಹಂಚಿಕೆಯಲ್ಲಿ ಪಕ್ಷ ನಿಷ್ಠೆ ಗೆಲುವಿಗೆ ಮಾನದಂಡವಾಗುತ್ತೆ: ಪ್ರಹ್ಲಾದ್ ಜೋಶಿ
Advertisement
Advertisement
ಶಿರಸಿ ಪ್ರತ್ಯೇಕ ಜಿಲ್ಲೆ ವಿಚಾರದಲ್ಲಿ ಸ್ಪೀಕರ್ ಕಾಗೇರಿ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ವಿಷಯದ ಬಗ್ಗೆ ನನಗೆ ಗೊತ್ತಿಲ್ಲ. ಪತ್ರಿಕೆಯಲ್ಲಿ ಓದಿದ್ದೇನೆ. ನನ್ನ ಸ್ನೇಹಿತರು ಅವರೊಂದಿಗೆ ಈ ವಿಚಾರದ ಕುರಿತು ಮಾತನಾಡಿಲ್ಲ. ಅವರು ಹಿರಿಯರು, ನಿಶ್ಚಿತವಾಗಿ ಅವರೊಂದಿಗೆ ಚರ್ಚೆ ಮಾಡುತ್ತೇವೆ ಎಂದರು.
Advertisement
ಉತ್ತರ ಕನ್ನಡ ಜಿಲ್ಲೆ ಇಬ್ಭಾಗ ಮಾಡುವ ಕುರಿತು ನಾನು ಯಾವತ್ತು ಕೂಡ ಪ್ರಸ್ತಾಪ ಮಾಡಿಲ್ಲ. ಇವತ್ತು ನಾನು ಹೇಳುವುದಿಲ್ಲ. ಈ ಬಗ್ಗೆ ಮಾತನಾಡಲಿಕ್ಕೆ ನಾನು ಉಸ್ತುವಾರಿ ಸಚಿವನಲ್ಲ. ಆ ಜವಾಬ್ದಾರಿ ನನ್ನದಲ್ಲ. ಜಿಲ್ಲೆಯ ಶಾಸಕನಾಗಿ ನಾನು ಮಾತನಾಡುವ ಅವಶ್ಯಕತೆ ಇದೆ. ಜಿಲ್ಲೆ ಇಬ್ಭಾಗದ ಕುರಿತು ಬುದ್ಧಿಜೀವಿಗಳು ಹಾಗೂ ನಮ್ಮೆಲ್ಲ ಶಾಸಕರ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನಾನೂ ಗೂಂಡಾಗಿರಿ ಮಾಡ್ತಿದ್ದೆ, ಜೀನ್ಸ್ ಪ್ಯಾಂಟ್ ಹಾಕ್ಕೊಂಡ್ರೆ ಹುಡ್ಗೀರೆಲ್ಲಾ ನನ್ನೇ ನೋಡ್ತಿದ್ರು: ಶ್ರೀರಾಮುಲು
Advertisement
ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಮತ ಮುಖ್ಯ. ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಆದರೆ ಎಲ್ಲರ ಅಭಿಪ್ರಾಯದೊಂದಿಗೆ ಆಗಬೇಕು. ಶಿರಸಿ ಪ್ರತ್ಯೇಕ ಜಿಲ್ಲೆ ಬಗ್ಗೆ ಕಾಗೇರಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.