ಹಾವೇರಿ: ಬಸವರಾಜ್ ಹೊರಟ್ಟಿ ಈಗಾಗಲೇ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. ಅವರಿಗೆ ಸ್ವಾಗತ ಮಾಡುತ್ತೇನೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ಮೆಡಿಕಲ್ ಕಾಲೇಜ್ ಕಾಮಗಾರಿ ವೀಕ್ಷಿಸಿ ನಂತರ ಮಾತನಾಡಿದ ಅವರು, ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಈ ವಾರದಲ್ಲಿ ಉನ್ನತಮಟ್ಟದ ಸಭೆ ಕರೆಯಲಿದ್ದಾರೆ. ಉನ್ನತಮಟ್ಟದ ಸಭೆ ನಂತರ ದಿನಾಂಕ ಅಂತಿಮವಾಗಬಹುದು. ಸಮ್ಮೇಳನವನ್ನು ಐತಿಹಾಸಿಕವಾಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಇದೇ ಪ್ರಥಮ ಬಾರಿಗೆ ಸರ್ಕಾರ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನವನ್ನು ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ
Advertisement
Advertisement
ಜಿಲ್ಲೆಯಲ್ಲಿ ಸ್ವಲ್ಪ ವಸತಿ ಸಮಸ್ಯೆ ಇರುವ ಕಾರಣ ಸಮ್ಮೇಳನದ ಪೂರ್ವ ತಯಾರಿ ನಡೆಸಬೇಕಿದೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತಿಗಳನ್ನು ಸಮಾಧಾನವಾಗಿ ಕಳಿಸುವ ಜವಾಬ್ದಾರಿ ಇದೆ. ಹೀಗಾಗಿ ಸಮ್ಮೇಳನಕ್ಕೆ ಎಚ್ಚರಿಕೆ ರೀತಿಯಲ್ಲಿ ತಯಾರಿ ನಡೆಸುತ್ತಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಹೆಚ್.ಡಿ ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು: ಡಾ.ಕೆ. ಸುಧಾಕರ್
Advertisement
Advertisement
ಹಾವೇರಿ ಮೆಡಿಕಲ್ ಕಾಲೇಜ್ ಕಾಮಗಾರಿ ಡಿಸೆಂಬರ್ ಅಂತ್ಯದಲ್ಲಿ ಮುಕ್ತಾಯಗೊಳ್ಳಲಿದೆ. ಬರುವ ವರ್ಷದಿಂದ ಮೆಡಿಕಲ್ ಕಾಲೇಜಿನಲ್ಲಿ 150 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದು ಮೆಡಿಕಲ್ ಓದಲಿದ್ದಾರೆ. ಹಿಜಬ್, ಹಲಾಲ ಕಟ್, ಪ್ರಾರ್ಥನಾ ಮಂದಿರಗಳ ಧ್ವನಿವರ್ಧಕ ಸೇರಿದಂತೆ ಯಾವುದೇ ವಿವಾದಾತ್ಮಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವದಿಲ್ಲ ಎಂದು ತಿಳಿಸಿದರು.