ಕಾರವಾರ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಮಗೆ ಹಣ ನೀಡಿದೆ ಎಂದಾದರೆ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ (BJP), ಕಾಂಗ್ರೆಸ್‍ನವರಿಗೆ (Congress) ಎಷ್ಟು ಹಣ ನೀಡಿದೆ ಎಂಬುದನ್ನು ಹೇಳಲಿ ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ವಾಗ್ದಾಳಿ ನಡೆಸಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಈಶ್ವರಪ್ಪನವರ (K.S Eshwarappa) ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೇರೆ ರಾಜ್ಯದಲ್ಲಿ ಬಿಜೆಪಿ ಎಷ್ಟೆಷ್ಟು `ಇನ್ವೆಸ್ಟ್‌ಮೆಂಟ್’ ಮಾಡಿದೆ ಎಂಬುದನ್ನೂ ಹೇಳಬೇಕು. ಈಶ್ವರಪ್ಪನವರ ಮಾತನ್ನು ರಾಜ್ಯ ಬಿಜೆಪಿಯೇ ಗಂಭೀರವಾಗಿ ಪರಿಗಣಿಸುವುದಿಲ್ಲ. ಅವರು ಏನೆಲ್ಲಾ ಮಾಡಿಕೊಂಡು ರಾಜೀನಾಮೆ ನೀಡುವ ಸ್ಥಿತಿ ಬಂತು ಎಂಬುದು ನಾಡಿನ ಜನಕ್ಕೆ ಹಾಗೂ ಸ್ವತಃ ಅವರಿಗೂ ತಿಳಿದಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್
ಬಿಜೆಪಿ ಸರ್ಕಾರ ಬರುವಾಗ ಈಶ್ವರಪ್ಪ ನಮಗೆ ಎಷ್ಟು ಕೋಟಿ ರೂ. ಕೊಟ್ಟಿದ್ದರು ಎಂಬುದನ್ನು ಹೇಳಬೇಕಾಗುತ್ತದೆ. ಅವರು ಗಾಜಿನ ಮನೆಯಲ್ಲಿ ಕುಳಿತುಕೊಂಡು ಇನ್ನೊಂದು ಗಾಜಿಗೆ ಕಲ್ಲು ಹೊಡೆಯುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಇದೇ ವೇಳೆ ಲೋಕಸಭಾ ಚುನಾವಣೆ ಸ್ಪರ್ಧೆಯ ಬಗ್ಗೆ, ಇದು ಕೇವಲ ಮಾಧ್ಯಮ ಸೃಷ್ಟಿ ಎಂದಿದ್ದಾರೆ. ಇದನ್ನೂ ಓದಿ: ಪಾಕ್ ಪ್ರಧಾನಿಯಾಗಿ 2 ನೇ ಬಾರಿಗೆ ಆಯ್ಕೆಯಾದ ಶೆಹಬಾಜ್ ಷರೀಫ್