ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಾಣ ಮಾಡುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯಲ್ಲಿ 03-08-2018ರ ಮುಂಚಿತವಾಗಿ ಸಾರ್ವಜನಿಕರು ನಿರ್ಮಾಣ ಮಾಡಿರುವ 300 ಕಟ್ಟಡಗಳನ್ನು ಸಕ್ರಮಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು ತಿಳಿಸಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರಂತ್ ಬಡಾವಣೆ ಕುರಿತು ಸುಪ್ರೀಂ ಕೋರ್ಟ್ ರಚಿಸಿರುವ ಸಮಿತಿ ಈವರೆಗೆ ಸುಮಾರು 6,200 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದೆ. ಅದರಲ್ಲಿ ಮೊದಲ ಹಂತದಲ್ಲಿ 300 ಕಟ್ಟಡಗಳ ದಾಖಲೆಗಳನ್ನು ಇತ್ತೀಚಿಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿತ್ತು, ಅದನ್ನು ಮಾನ್ಯ ಮಾಡಿರುವ ನ್ಯಾಯಪೀಠ ನಾಲ್ಕು ವಾರದೊಳಗಾಗಿ ಸಂಬಂಧಿಸಿದವರಿಗೆ ಹಕ್ಕುಪತ್ರ ವಿತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್- ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ!
Advertisement
Advertisement
ಸಕ್ರಮಗೊಳಿಸಿರುವ ಈ 300 ಕಟ್ಟಡಗಳ ಮಾಲೀಕರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಕೂಡ ತಮ್ಮ (ಸುಪ್ರೀಂ ಕೋರ್ಟ್) ನೇತೃತ್ವದ ಸಮಿತಿಯ ಮಾರ್ಗದರ್ಶನದಲ್ಲಿ ನಡೆಸಬೇಕು ಎಂದು ಸೂಚಿಸಿದೆ. ಈಗಾಗಲೇ ಆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಪ್ರತಿಯೊಬ್ಬರಿಗೂ ನೇರವಾಗಿ ಅವರು ನೋಂದಾಯಿಸಿಕೊಂಡಿರುವ ಮೊಬೈಲ್‍ಗಳಿಗೆ ಹಕ್ಕುಪತ್ರ ವಿತರಣೆ ಕುರಿತು ಸಂದೇಶ ರವಾನಿಸಲು ಕ್ರಮ ಕೈಕೊಳ್ಳಲಾಗುವುದು ಎಂದರು.
Advertisement
ನ್ಯಾಯಾಲಯದ ಆದೇಶದಂತೆ ಕಾರಂತ್ ಬಡಾವಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ದಾಖಲೆಗಳನ್ನು ನೇರವಾಗಿ ಸಲ್ಲಿಸಲು ಸಹಾಯವಾಗುವಂತೆ ಸಹಾಯ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಕುರಿತು ಈವರೆಗೆ ಸಾರ್ವಜನಿಕ ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಹಾಗೂ ಮಾಧ್ಯಮಗಳ ಮೂಲಕ ಜಾಹೀರಾತು ನೀಡಲಾಗಿದೆ. ಸಮಿತಿಯು ಸಾರ್ವಜನಿಕರು ಸಲ್ಲಿಸಿರುವ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ವೈಜ್ಞಾನಿಕವಾಗಿ ಶೇಖರಿಸಿಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕಿ: ಸಾಲೂರುಶ್ರೀ
Advertisement
ಮೊದಲ ಹಂತದಲ್ಲಿ ಸಲ್ಲಿಸಿದ್ದ 300 ಕಟ್ಟಡಗಳನ್ನು ಸಕ್ರಮಗೊಳಿಸಿರುವ ನ್ಯಾಯಾಲಯಕ್ಕೆ ಪ್ರತಿ ತಿಂಗಳಿಗೊಮ್ಮೆ ಇಂತಿಷ್ಟು ಗುರಿಯೊಂದಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ವೇಗವಾಗಿ ಅಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಮತ್ತು ಸಕ್ರಮವಾಗಿ ಕಟ್ಟಡ ಕಟ್ಟಿರುವ ಸಾರ್ವಜನಿಕರ ಹಿತ ಕಾಯಲಾಗುವುದು. ಸುಪ್ರೀಂ ಕೋರ್ಟ್ ನೀಡಿರುವ ಈ ಆದೇಶ ಅತ್ಯಂತ ಮಹತ್ತರವಾದದ್ದಾಗಿದ್ದು, ಬಡವರು ಮತ್ತು ಮಧ್ಯಮ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸಿದೆ. ಕಾರಂತ್ ಬಡಾವಣೆ ಒಂದು ಅತ್ಯುತ್ತಮ ಬಡಾವಣೆಯಾಗಿ ರೂಪುಗೊಳ್ಳಲಿದ್ದು, ತಮ್ಮ ನೇತೃತ್ವದ ಸಮಿತಿ ಪ್ರತಿ ಹಂತದಲ್ಲೂ ನಿರ್ಣಾಯಕ ಪಾತ್ರವಹಿಸುತ್ತಿದೆ ಎಂದು ಹೇಳಿದರು.
ಕಾರಂತ್ ಬಡಾವಣೆಯ ಸಾರ್ವಜನಿಕರು ತಮ್ಮ ವ್ಯಾಜ್ಯಗಳ ಕುರಿತಂತೆ ಸಮಿತಿಯನ್ನು ನೇರವಾಗಿ ಭೇಟಿಯಾಗಬಹುದಾಗಿದೆ. ಎರಡನೇ ಹಂತದಲ್ಲಿ ಮತ್ತಷ್ಟು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ಡಿಸೆಂಬರ್ ತಿಂಗಳೊಳಗೆ ಮತ್ತೊಂದು ಆದೇಶವನ್ನು ಪಡೆಯುವ ಗುರಿ ನಿರೀಕ್ಷಿಸಲಾಗಿದೆ. ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಮೂರು ವಿಧಗಳಲ್ಲಿ ವಿಭಜಿಸಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ನಿರ್ಮಿಸಿರುವ ಕಟ್ಟಡಗಳು, ಸಕ್ಷಮವಲ್ಲದ ಸ್ಥಳೀಯ ಪ್ರಾಧಿಕಾರದಿಂದ (ಗ್ರಾಮ ಪಂಚಾಯಿತಿಗಳು) ಅನುಮತಿ ಪಡೆದು ನಿರ್ಮಿಸಿರುವ ಕಟ್ಟಡಗಳು ಹಾಗೂ ಯಾವುದೇ ಅನುಮತಿಯನ್ನು ಪಡೆಯದೇ ನಿರ್ಮಿಸಿರುವ ಕಟ್ಟಡಗಳೆಂದು ಗುರುತಿಸಲಾಗಿದೆ. ಪ್ರತಿ ದಾಖಲೆಗಳನ್ನೂ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಎಲ್ಲರಿಗೂ ನ್ಯಾಯ ಒದಗಿಸುವುದು ನಮ್ಮ ಗುರಿಯಾಗಿದೆ. ಸಾರ್ವಜನಿಕರು ಸಮಿತಿಯ ಹೆಚ್ಚಿನ ಮಾಹಿತಿಗಾಗಿ https://jcc-skl.in/ ಗೆ ಭೇಟಿ ನೀಡಬಹುದಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ನಿವೃತ್ತ ಐಎಎಸ್ ಅಧಿಕಾರಿ ಜೈಕರ್ ಜೆರೋಮ್ ಅವರು ಉಪಸ್ಥಿತಿರಿದ್ದರು.