ಬೆಂಗಳೂರು: ಶಿವರಾತ್ರಿ ಪ್ರಯುಕ್ತ ಆರ್.ಆರ್. ನಗರ ಕ್ಷೇತ್ರದ ಜೆ.ಪಿ. ಪಾರ್ಕ್‌ನಲ್ಲಿ ಅಹೋರಾತ್ರಿ ವಿವಿಧ ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ವೇಳೆ ಸಚಿವ ಮುನಿರತ್ನ ಹಾಗೂ ಅವಧೂತ ವಿನಯ್ ಗುರೂಜಿ ಅವರಿಂದ 1 ಸಾವಿರ ಸಾಧಕರಿಗೆ ಸನ್ಮಾನ ಇರಲಿದೆ.
Advertisement
ಸಮಾರಂಭದಲ್ಲಿ 30 ಅಡಿ ಎತ್ತರದ ಶಿವನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 1 ಸಾವಿರ ಸಾಧಕರಿಗೆ ʼರಾಜರಾಜೇಶ್ವರಿ ರತ್ನʼ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಶಿವರಾತ್ರಿ ಜಾಗರಣೆಯಂದು ಅಹೋರಾತ್ರಿ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಇದನ್ನೂ ಓದಿ: ಚಾಮರಾಜನಗರದಲ್ಲಿ ಶಿವರಾತ್ರಿ ಸಂಭ್ರಮ – ಮಾದಪ್ಪನ ಬೆಟ್ಟದಲ್ಲಿ ಹಣ್ಣು, ತರಕಾರಿ ಅಲಂಕಾರ
Advertisement
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುನಿರತ್ನ, ಅವಧೂತ ವಿನಯ್ ಗುರೂಜಿ, ನಟ ಕಿಚ್ಚ ಸುದೀಪ್ ಪಾಲ್ಗೊಳ್ಳಲಿದ್ದಾರೆ.
Advertisement
Advertisement
ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ, ನನ್ನ ಕ್ಷೇತ್ರದ ಜನತೆಯ ಋಣ ನನ್ನ ಮೇಲಿದೆ. ಅವರಿಗಾಗಿಯೇ ಈ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆವರೆಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸುಮಾರು ಎರಡು ಲಕ್ಷ ಜನ ಬೆಳಗ್ಗೆವರೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 23,000 ರುದ್ರಾಕ್ಷಿ ಬಳಸಿ ಶಿವನ ಶಿಲ್ಪಕಲೆ – ಕಲಾವಿದನ ಕೈಚಳಕಕ್ಕೆ ಮನಸೋತ ನೆಟ್ಟಿಗರು