ಬೆಂಗಳೂರು: ಕೆಪಿಎಸ್‌ಸಿ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಂಪುಟ ಸಭೆ ನಡೆಸಿ ಅಮಾನತಿಗೆ ಸರ್ಕಾರ ಅಧಿಕೃತ ಶಿಫಾರಸು ಮಾಡಿತ್ತು. ರಾಜ್ಯಪಾಲರಿಂದ 2ನೇ ಬಾರಿಗೆ ಅಮಾನತು ಆದೇಶ ಹೊರಬಿದ್ದಿದೆ. ರಾಷ್ಟ್ರಪತಿಗಳು ಮುಂದಿನ ಆದೇಶ ನೀಡುವವರೆಗೂ ಅಮಾನತು ಆದೇಶ ಜಾರಿಯಲ್ಲಿರಲಿದೆ. ಇದನ್ನೂ ಓದಿ: ಕೆಪಿಎಸ್‌ಸಿ ಹಗರಣ | ಸಿಎಂ ಗೃಹಕಚೇರಿ ʻಕೃಷ್ಣಾʼ ಮುತ್ತಿಗೆಗೆ ವಿದ್ಯಾರ್ಥಿಗಳ ಯತ್ನ
ರಾಜ್ಯ ಸಚಿವ ಸಂಪುಟದ ಅನುಮತಿ ಪಡೆಯದೇ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಈ ಹಿಂದೆ ತಿಳಿಸಿತ್ತು.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಆಗಸ್ಟ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಒಪ್ಪಿಗೆ ನೀಡಲಾಗಿತ್ತು. ಇದನ್ನೂ ಓದಿ: ಕೆಪಿಎಸ್‌ಸಿ ಹಗರಣ – 329 ಅಭ್ಯರ್ಥಿಗಳಿಗೆ ಸಿಐಡಿ ಶಾಕ್, ಇಂದೇ ವಿಚಾರಣೆಗೆ ಹಾಜರಾಗಲು ನೋಟಿಸ್!
