ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್ ಆದೇಶವನ್ನು ಒಪ್ಪಿಕೊಂಡಿರುವ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ), 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕಿರುವ ಶಿವಲಿಂಗವೂ ಒಂದಾಗಿದೆ. ಇದನ್ನು ಸಾಬೀತು ಪಡಿಸಲು ನಮ್ಮಿಂದ ಸಾಧ್ಯವಿದೆ ಎಂದು ತಿಳಿಸಿದೆ.
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವುದರ ಬಗ್ಗೆ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖ್ಯಸ್ಥ ಅಲೋಕ್ ಕುಮಾರ್, ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿರುವುದು ಒಂದು ಗಂಭೀರ ವಿಚಾರ. ಇದು 12 ಜ್ಯೋತಿರ್ಲಿಂಗಗಳಲ್ಲಿ ಒಂದು ಎಂದು ಸಾಬೀತುಪಡಿಸಲು ಅನುಭವಿ ನ್ಯಾಯಾಧೀಶರ ಅಗತ್ಯವಿದೆ. ಜಿಲ್ಲಾ ನ್ಯಾಯಾಲಯ ಇದನ್ನು ಪರಿಶೀಲಿಸಲಿದೆ ಎಂದು ತಿಳಿಸಿದೆ. ಸುಪ್ರಿಂ ಕೋರ್ಟ್ ನಿರ್ಧಾರವನ್ನು ನಾವು ಒಪ್ಪುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ – ದೆಹಲಿ ಪ್ರಾಧ್ಯಾಪಕ ಅರೆಸ್ಟ್
Advertisement
Advertisement
ಜ್ಞಾನವಾಪಿ ಮಸೀದಿಯಲ್ಲಿ ನಂದಿಯೂ ಕಂಡುಬಂದಿತ್ತು. ಹೀಗಾಗಿ ಇದನ್ನು ನಾವು ಶಿವಲಿಂಗ ಎಂದು ಬಲವಾಗಿ ನಂಬಬಹುದು. 12 ಜ್ಯೋತಿರ್ಲಿಂಗಗಳಲ್ಲಿ ಇದು ಒಂದು ಎಂಬುದನ್ನು ಸಾಬೀತುಪಡಿಸಬಹುದು. ಹಿಂದೂ ದೇವಾಲಯವನ್ನು ಮೊಘಲರು ವಶಪಡಿಸಿಕೊಂಡು, ಅದರ ಹಳೆಯ ಅವಶೇಷಗಳ ಮೇಲೆ ಮಸೀದಿಯನ್ನು ಕಟ್ಟಲಾಗಿದೆ. ನಾವು ಅದನ್ನು ನ್ಯಾಯಾಲಯಕ್ಕೆ ಸಾಬೀತುಪಡಿಸಲು ಸಾಧ್ಯವಿದೆ. ಸುಪ್ರಿಂ ಕೋರ್ಟ್ ಈ ಪ್ರಕರಣವನ್ನು ನಿರ್ಧರಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಯಮುನೋತ್ರಿ ದೇವಸ್ಥಾನದ ಹೆದ್ದಾರಿಯಲ್ಲಿ ಗೋಡೆ ಕುಸಿತ – 10 ಸಾವಿರ ಮಂದಿ ಸಂಕಷ್ಟದಲ್ಲಿ
Advertisement
Advertisement
ಜ್ಞಾನವಾಪಿ ಮಸೀದಿ ಪ್ರಕರಣವನ್ನು ಶುಕ್ರವಾರ ಸುಪ್ರಿಂ ಕೋರ್ಟ್ ಸಿವಿಲ್ ನ್ಯಾಯಾಧೀಶರಿಂದ ವಾರಣಾಸಿ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿದೆ. ಉತ್ತರ ಪ್ರದೇಶದ ಉನ್ನತ ನ್ಯಾಯಾಂಗ ಸೇವೆಯ ಹಿರಿಯ ಹಾಗೂ ಅನುಭವಿ ಅಧಿಕಾರಿಗಳು ಪ್ರಕರಣವನ್ನು ಪರಿಶೀಲಿಸಬೇಕೆಂದು ಆದೇಶಿಸಿದೆ.