Connect with us

Districts

ಬಡ, ಮಧ್ಯಮ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಿ – ವಿದ್ಯಾರ್ಥಿಗಳ ಆಗ್ರಹ

Published

on

ಶಿವಮೊಗ್ಗ: ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಇಂದು ಎನ್‍ಎಸ್‍ಯುಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಅಂತಿಮ ವರ್ಷದ ಪದವಿ ಕಾಲೇಜ್‍ಗಳು ಆರಂಭವಾಗಿ ಈಗಾಗಲೇ ಒಂದು ತಿಂಗಳುಗಳೇ ಕಳೆಯುತ್ತಿವೆ. ಕೊರೋನಾಗೆ ಲಸಿಕೆಯೂ ಬಂದಿದೆ. ಹೀಗಿದ್ದರೂ ಹಾಸ್ಟೆಲ್‍ಗಳು ಮಾತ್ರ ಆರಂಭವಾಗಿಲ್ಲ. ಕೆಲವೆಡೆ ಹಾಸ್ಟೆಲ್ ಆರಂಭವಾಗಿದ್ದರೂ 100 ಕಿ.ಮೀ. ವ್ಯಾಪ್ತಿಯ ಹೊರಗಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದು, 100 ಕಿ.ಮೀ. ವ್ಯಾಪ್ತಿಯ ಒಳಗಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಪ್ರವೇಶ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದ ಕಾರಣ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಬಡ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಹಾಗೂ ಹಾಸ್ಟೆಲ್‍ನಲ್ಲಿ ಅಗತ್ಯ ಇರುವ ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಿಕೊಡುವ ಮೂಲಕ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೂ ಅನುಕೂಲ ಮಾಡಿಕೊಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Click to comment

Leave a Reply

Your email address will not be published. Required fields are marked *