ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivraj Kumar) ಏಕಕಾಲಕ್ಕೆ ತಮಿಳಿನ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಒಂದು ಸಿನಿಮಾದಲ್ಲಿ ರಜನಿಕಾಂತ್ ನಾಯಕನಾದರೆ ಮತ್ತೊಂದು ಸಿನಿಮಾದಲ್ಲಿ ರಜನಿ ಅಳಿಯ ಧನುಷ್ (Dhanush) ನಾಯಕ. ಈ ಎರಡೂ ಚಿತ್ರಗಳು ಶೂಟಿಂಗ್ ನಡೆಯುತ್ತಿದ್ದು, ಎರಡಲ್ಲೂ ಶಿವಣ್ಣ ಪಾಲ್ಗೊಂಡಿದ್ದಾರೆ.
Advertisement
ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಪಾತ್ರ ಯಾವುದು, ಹಿನ್ನೆಲೆ ಏನು ಎನ್ನುವ ವಿಚಾರ ಈವರೆಗೂ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಸ್ವತಃ ಶಿವರಾಜ್ ಕುಮಾರ್ ಕೂಡ ಈತನಕ ಹೇಳಿಕೊಂಡಿಲ್ಲ. ಪಾತ್ರ ಮತ್ತು ಕಥೆಯ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಬರಲಾಗುತ್ತಿದೆ. ಇದನ್ನೂ ಓದಿ: ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ
Advertisement
Advertisement
ಆದರೆ, ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.
Advertisement
ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.