ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ (Srini) ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivraj Kumar) ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್” (Ghost) ಚಿತ್ರದ ಮೋಷನ್ ಪೋಸ್ಟರ್ (Motion Poster) ನೂತನ ವರ್ಷದ ಮೊದಲ ದಿನ ಬಿಡುಗಡೆಯಾಗಿದೆ.
ಮೋಷನ್ ಪೋಸ್ಟರ್ ಬಾರಿ ಕುತೂಹಲ ಹುಟ್ಟಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಮೈಸೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮೂರನೇ ಹಂತದ ಚಿತ್ರೀಕರಣ ಫೆಬ್ರವರಿಯಲ್ಲಿ ಆರಂಭವಾಗಲಿದೆ. ನಾಯಕ ಶಿವರಾಜಕುಮಾರ್ ಸೇರಿದಂತೆ ಅನೇಕ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ದ್ವಿತೀಯ ಹಂತದ ಚಿತ್ರೀಕರಣ ಪೂರ್ಣವಾಗಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್ ” ಚಿತ್ರಕ್ಕಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.