CinemaKarnatakaLatestMain PostSandalwood

ಜನಾರ್ದನ್ ರೆಡ್ಡಿ ಮಗನ ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಸರ್ಪ್ರೈಸ್ ವಿಸಿಟ್

ಮಾಜಿ ಮಂತ್ರಿ ಗಾಲಿ ಜನಾರ್ದನ್ ರೆಡ್ಡಿ ಪುತ್ರ, ನಟ ಕಿರೀಟಿ ಗಂಧದಗುಡಿ ಅಂಗಳಕ್ಕೆ ಗ್ರ್ಯಾಂಡ್ ಆಗಿ ಬಂದಾಗಿದೆ. ಇನ್ನೂ ಹೆಸರಿಡದ ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದೆ. ರಾಧಾಕೃಷ್ಣ ರೆಡ್ಡಿ ಸಾರಥ್ಯದಲ್ಲಿ ತಯಾರಾಗುತ್ತಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ. ಈಗಾಗಲೇ ರಿಲೀಸ್ ಆಗಿರುವ ಕಿರೀಟಿ ಇಂಟ್ರೂಡಕ್ಷನ್ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ಸಿನಿಮಾ ಅಂಗಳದಿಂದ ನಯಾ ಖಬರ್ ರಿವೀಲ್ ಆಗಿದೆ.

ಅದ್ಧೂರಿಯಾಗಿ ಮುಹೂರ್ತ ನೆರವೇರಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಬ್ರೇಕ್ ತೆಗೆದುಕೊಳ್ಳದೇ ನಿರಂತರವಾಗಿ ಚಿತ್ರೀಕರಣ ನಡೆಸುತ್ತಿದೆ. ಸದ್ಯ ಬೆಂಗಳೂರಿನ ನಾಗವಾರದ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಶೂಟಿಂಗ್ ಸೆಟ್ ಗೆ ದೊಡ್ಮನೆ ದೊರೆ ಶಿವಣ್ಣ ಸರ್ಪ್ರೈಸ್ ಆಗಿ ವಿಸಿಟ್ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕೆಲಕಾಲ ಅಲ್ಲಿಯೇ ಸಮಯ ಕಳೆದ ಶಿವಣ್ಣ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಡೀ ತಂಡ ಹಾಗೂ ಜನಾರ್ದನ ರೆಡ್ಡಿ ಕೂಡ ಉಪಸ್ಥಿತರಿದ್ದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ತನ್ನಿ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

ಹೆಸರಿಡದ ಕಿರೀಟಿ ಚೊಚ್ಚಲ ಸಿನಿಮಾದ ಟೈಟಲ್ ಅನಾವರಣಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 29ಕ್ಕೆ ಕಿರೀಟಿ ಹುಟ್ಟುಹಬ್ಬವಿದೆ. ಈ ದಿನದಂದೂ ಟೈಟಲ್ ರಿವೀಲ್ ವಿಡಿಯೋ ಝಲಕ್ ರಿಲೀಸ್ ಮಾಡಲು ಯೋಜನೆ ಹಾಕಿಕೊಂಡಿದೆ. ಸದ್ಯ ಬಹುತೇಕ ಭಾಗ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪ್ರೊಡಕ್ಷನ್ ಕೆಲಸಗಳು ಕೂಡ ಭರದಿಂದ ನಡೆಯುತ್ತಿವೆ. ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡುತ್ತಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

Live Tv

Leave a Reply

Your email address will not be published.

Back to top button