ಶಿವರಾಜ್ ಕುಮಾರ್ ಗಾಗಿ ಚಿತ್ರ ಮಾಡಲಿದೆ ಹೊಂಬಾಳೆ ಫಿಲ್ಮ್ಸ್: ನಿರ್ದೇಶಕರು ಯಾರು?

Advertisements

ಡಾ.ರಾಜ್ ಕುಟುಂಬದ ಸಿನಿಮಾದೊಂದಿಗೆ ಚಿತ್ರೋದ್ಯಮಕ್ಕೆ ಕಾಲಿಟ್ಟ ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಹಲವು ಸಿನಿಮಾಗಳನ್ನು ಘೋಷಣೆ ಮಾಡಿದೆ. ಕೆಜಿಎಫ್ 2, ಸಲಾರ್ ನಂತಹ ಬಹುಕೋಟಿ ಬಜೆಟ್ ಸಿನಿಮಾಗಳನ್ನೂ ಇದು ನಿರ್ಮಾಣ ಮಾಡಿದೆ. ಅಲ್ಲದೇ, ಎಂಟಕ್ಕೂ ಹೆಚ್ಚು ಚಿತ್ರಗಳನ್ನು ತಯಾರಿಕೆಯ ಘೋಷಣೆ ಕೂಡ ಮಾಡಿದೆ. ಇದೀಗ ಮತ್ತೊಂದು ಹೊಸ ಸಿನಿಮಾ ಮಾಡಲು ಪ್ಲ್ಯಾನ್ ಮಾಡಲಾಗಿದ್ದು, ಈ ಚಿತ್ರಕ್ಕೆ ಶಿವರಾಜ್ ಕುಮಾರ್ ನಾಯಕ ಎನ್ನಲಾಗುತ್ತಿದೆ.

Advertisements

ಪುನೀತ್ ರಾಜ್ ಕುಮಾರ್ ನಟನೆಯ ‘ನಿನ್ನಂದಲೇ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದು ಹೊಂಬಾಳೆ ಫಿಲ್ಮ್ಸ್, ಆನಂತರ ರಾಜಕುಮಾರ, ಸೇರಿದಂತೆ ಹಲವು ಸಿನಿಮಾಗಳನ್ನು ಪುನೀತ್ ಗಾಗಿ ನಿರ್ಮಾಣ ಮಾಡಿತು. ಪುನೀತ್ ನಿಧನದ ನಂತರ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಅವರನ್ನು ಇದೇ ಬ್ಯಾನರ್ ನಲ್ಲೇ ಸಿನಿಮಾ ರಂಗಕ್ಕೆ ಪರಿಚಯಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ನಟನೆಯ ಸಿನಿಮಾವನ್ನೂ ಹೊಂಬಾಳೆ ನಿರ್ಮಾಣ ಮಾಡಲಿದೆ ಎಂದು ಹೇಳಲಾಗುತ್ತಿದೆ. ಇದನ್ನು ಓದಿ:  ಮದುವೆಗೆ ಸಜ್ಜಾದ ನಿರೂಪಕಿ ಅನುಶ್ರೀ: ಹುಡುಗ ಯಾರು?

Advertisements

ಈ ಕುರಿತು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಹೇಳಿಕೆ ನೀಡದೇ ಇದ್ದರೂ, ತೆರೆಯ ಮರೆಯಲ್ಲಿ ಶಿವರಾಜ್ ಕುಮಾರ್ ಸಿನಿಮಾದ ತಯಾರಿ ಕೂಡ ನಡೆಸಿದೆ ಎನ್ನಲಾಗುತ್ತಿದೆ. ರತ್ನನ್ ಪ್ರಪಂಚ ಸಿನಿಮಾ ಮಾಡಿದ ಪ್ರದೀಪ್ ಪದಕಿ ಅವರೇ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನುವುದು ಸಿಕ್ಕಿರುವ ಮಾಹಿತಿ. ಸದ್ಯ ಶಿವಣ್ಣ ವೇದ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಾವು ಒಪ್ಪಿಕೊಂಡಿರುವ ಸಿನಿಮಾಗಳ ಶೂಟಿಂಗ್ ಮುಗಿದ ನಂತರ ಈ ಚಿತ್ರದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.

Advertisements
Advertisements
Exit mobile version