ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್

Public TV
1 Min Read
shivraj singh chouhan

ಭೋಪಾಲ್: ಹಸು ಸಗಣಿ ಹಾಗೂ ಮೂತ್ರವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

cow dung cakes 1

ಭಾರತೀಯ ಪಶುವೈದ್ಯಕೀಯ ಸಂಘದಿಂದ ಆಯೋಜಿಸಲಾದ ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರವು ಗೋವುಗಳ ರಕ್ಷಣೆಗಾಗಿ ಗೋಶಾಲೆಗಳನ್ನು ಸ್ಥಾಪಿಸಿದೆ. ಆದರೆ ಅವುಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಮಾಜದ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ನಾವು ಬಯಸಿದರೆ ನಮ್ಮ ಆರ್ಥಿಕತೆಯನ್ನು ಬಲಪಡಿಸಬಹುದು. ಗೋವುಗಳು, ಅವುಗಳ ಸಗಣಿ ಮತ್ತು ಮೂತ್ರದ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢಗೊಳಿಸಬಹುದು. ಮರದ ಬಳಕೆಯನ್ನು ಕಡಿಮೆ ಮಾಡಲು ಮಧ್ಯಪ್ರದೇಶದ ಚಿತಾಗಾರದಲ್ಲಿ ಗೋಕಾಷ್ಟ (ಗೋವಿನ ಸಗಣಿಯಿಂದ ಮಾಡಿದ ತುಂಡು) ವನ್ನು ಬಳಸಲಾಗುತ್ತಿದೆ. ಸಣ್ಣ ರೈತರು ಮತ್ತು ಜಾನುವಾರು ಮಾಲೀಕರಿಗೆ ಹಸು ಸಾಕಣೆ ಹೇಗೆ ಲಾಭದಾಯಕ ವ್ಯವಹಾರವಾಗಬಲ್ಲದು ಎಂಬುದರ ಕುರಿತು ಪಶುವೈದ್ಯರು ಮತ್ತು ತಜ್ಞರು ಫಲಿತಾಂಶ ಆಧಾರಿತ ಕೆಲಸದಲ್ಲಿ ತೊಡಗಬೇಕು ಎಂದಿದ್ದಾರೆ. ಇದನ್ನೂ ಓದಿ:   ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

shivraj singh chouhan 7592

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರುಷೋತ್ತಮ ರೂಪಾಲ ಮಾತನಾಡಿ, ಗುಜರಾತ್‍ನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಹಸು ಸಾಕುವುದರಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಡೈರಿ ಉದ್ಯಮವು ಯಶಸ್ವಿಯಾಗಿದೆ. ಈ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಆಯ್ಕೆ ಮಾಡುವ ಮಹಿಳಾ ಪಶುವೈದ್ಯಕೀಯ ಪದವೀಧರರಿಗೆ ಕೇಂದ್ರ ಸರ್ಕಾರವು ಸಹಾಯ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *