ಬೆಳಗಾವಿ(ಚಿಕ್ಕೋಡಿ): ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರಿದಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವುದರ ಮೂಲಕ ಶಿವಸೇನೆ ಕಿಡಿಗೇಡಿಗಳು ಪುಂಡಾಟಿಕೆ ಪ್ರದರ್ಶಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯ ಕೊಲ್ಲಾಪುರ ನಗರದ ಹೊರವಲಯದಲ್ಲಿ ಪುಂಡಾಟಿಕೆ ಪ್ರದರ್ಶಿಸಿರುವ ಪುಂಡರು ಕರ್ನಾಟಕ ನವ ನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷನ ಪ್ರತಿಕೃತಿ ದಹನ ಮಾಡಿದ್ದಾರೆ. ಪ್ರತಿಕೃತಿ ದಹನ ಮಾಡುವ ಭರಾಟೆಯಲ್ಲಿ ಕನ್ನಡ ಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
Advertisement
ಇತ್ತೀಚಿಗೆ ಬೆಳಗಾವಿಯಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆಯ ಅಧ್ಯಕ್ಷ ಭೀಮಾ ಶಂಕರ ಪಾಟೀಲ ಪತ್ರಿಕಾಗೋಷ್ಠಿ ನಡೆಸಿ ಎಂಇಎಸ್ ನಾಯಕರನ್ನು ಗಡಿಯಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದರು. ಭೀಮಾ ಶಂಕರ ಪಾಟೀಲ ಅವರ ಹೇಳಿಕೆ ವಿರೋಧಿಸಿ ಪ್ರತಿಭಟನೆ ಮಾಡಿದ ಪುಂಡರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದಾರೆ.
Advertisement
ಮಹಾರಾಷ್ಟ್ರ ಪೊಲೀಸರು ಸ್ಥಳದಲ್ಲಿದ್ದರೂ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವುದನ್ನು ತಡೆಯದೇ ಪ್ರೋತ್ಸಾಹ ನೀಡಿದ್ದಾರೆ. ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆಗೆ ಕನ್ನಡ ಸಂಘಟನೆಗಳು ಯಾವ ರೀತಿ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ.