ಇಸ್ಲಮಾಬಾದ್: ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತೀ ವೇಗದ ಬೌಲಿಂಗ್ ದಾಖಲೆ ಬರೆದ ಪಾಕ್ ತಂಡದ ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ (Bhagavad Gita) ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಲೋಕಸಭೆಯಿಂದ ಅಭಿನಂದನೆ
ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.
2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್‌ಗಳಿಗೂ ಸಾಧ್ಯವಾಗಿಲ್ಲ.
ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ. ಇದನ್ನೂ ಓದಿ: ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು